
ಬರ್ನ್ (ಸ್ವಿಟ್ಜರ್ಲ್ಯಾಂಡ್) – ಸ್ವಿಟ್ಜರ್ಲ್ಯಾಂಡ್ ನ ವಿಂಟರಥುರ್ ನಗರದ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮೂವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಈ ದಾಳಿಯನ್ನು ಸರಕಾರಿ ಅಧಿಕಾರಿಗಳು ಭಯೋತ್ಪಾದಕ ಕೃತ್ಯ ಎಂದು ಘೋಷಿಸಿದ್ದಾರೆ. ಪೊಲೀಸರು ದಾಳಿಕೋರನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸ್ವಿಟ್ಜರ್ಲ್ಯಾಂಡ್ ಮತ್ತು ಟರ್ಕಿ ದೇಶಗಳ ದ್ವಿಪೌರತ್ವ ಹೊಂದಿರುವ 31 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆತ ವಿಂಟರಥುರ್ ನಗರದಲ್ಲೇ ವಾಸಿಸುತ್ತಿದ್ದನು.
ಪೊಲೀಸ್ ಮುಖ್ಯಸ್ಥ ಮಾರಿಯಸ್ ವೇಯರಮನ್ ಈ ಕುರಿತು ಮಾಹಿತಿ ನೀಡಿ, 2015 ರಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರಗಾಮಿ ಸಂಘಟನೆಯ ಪರವಾಗಿ ಅಪಪ್ರಚಾರ ಹರಡುತ್ತಿದ್ದ ಕಾರಣಕ್ಕಾಗಿ ಈತ ಸರಕಾರಿ ಭದ್ರತಾ ಸಂಸ್ಥೆಗಳ ನಿಗಾದಲ್ಲಿದ್ದನು. ಇತ್ತೀಚಿನ ದಿನಗಳಲ್ಲಿ ಪೊಲೀಸರ ತುರ್ತು ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ವಿಚಿತ್ರವಾಗಿ ಮಾತನಾಡುತ್ತಿದ್ದ ಕಾರಣ ಆತನನ್ನು ಮನೋವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿತ್ತು; ಆದರೆ ಆತನಿಂದ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ಪ್ರಮಾಣೀಕರಿಸಿದ ನಂತರ ಆತನನ್ನು ಅಲ್ಲಿಂದ ಬಿಡುಗಡೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ : Champat Rai Resignation
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake