ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ಭಾರತದ ಶ್ಲಾಘನೆ

ಟೆಲ್ ಅವಿವ್ (ಇಸ್ರೇಲ್) – ಜಗತ್ತಿನ ಹಲವು ಭಾಗಗಳಲ್ಲಿ ಇಸ್ರೇಲ್ ತೀವ್ರ ಟೀಕೆ ಮತ್ತು ವಿರೋಧವನ್ನು ಎದುರಿಸುತ್ತಿದೆ; ಆದರೆ ಭಾರತದಲ್ಲಿ ಇಸ್ರೇಲ್ ಗೆ ಅಭೂತಪೂರ್ವ ಬೆಂಬಲ ಸಿಗುತ್ತಿರುವುದು ಕಂಡುಬರುತ್ತಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ವೆಸ್ಟ್ ಬ್ಯಾಂಕ್ ನಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನದಲ್ಲಿ ಭಾರತವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಭಾರತದಲ್ಲಿ ಇಸ್ರೇಲ್ ಕುರಿತು ವಿಭಿನ್ನವಾದ ಪ್ರೀತಿಯಿದೆ!
ನೆತನ್ಯಾಹು ಅವರು ಮಾತು ಮುಂದುವರಿಸಿ, ಇಸ್ರೇಲ್ ನ ಜಾಗತಿಕ ಕಾರ್ಯತಂತ್ರದಲ್ಲಿ ಭಾರತಕ್ಕೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಭಾರತ ಮತ್ತು ಇಸ್ರೇಲ್ ನಡುವಿನ ಸಂಬಂಧ ಅನನ್ಯವಾಗಿದೆ. ಭಾರತದ ಜನರಲ್ಲಿ ಇಸ್ರೇಲ್ ಕುರಿತು ವಿಶೇಷವಾದ ಆತ್ಮೀಯತೆಯಿದೆ. ಜಗತ್ತಿನ ಅನೇಕ ದೇಶಗಳಲ್ಲಿ ನಾವು ವಿರೋಧವನ್ನು ಎದುರಿಸಬೇಕಾಗಿ ಬರುತ್ತದೆ; ಆದರೆ ಭಾರತದಲ್ಲಿ ಹಾಗಿಲ್ಲ. ಭಾರತದಲ್ಲಿ ಇಸ್ರೇಲ್ ಕುರಿತು ಸಂಪೂರ್ಣ ವಿಭಿನ್ನ ಮತ್ತು ಅಪಾರ ಪ್ರೀತಿಯಿದೆ. ಸಾಮಾಜಿಕ ಜಾಲತಾಣಗಳಲ್ಲಿ ನನಗಿರುವ ಅತ್ಯಧಿಕ ಬೆಂಬಲಿಗರು (ಫಾಲೋವರ್ಸ್) ಭಾರತದಲ್ಲೇ ಇದ್ದಾರೆ ಎಂದು ನನಗೆ ಅನಿಸುತ್ತದೆಯೆಂದು ಅವರು ಹೇಳಿದರು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation