ದೇವಸ್ಥಾನದ ಶುದ್ಧೀಕರಣದ ನಂತರದ ಮಹಾ ಆರತಿಗೆ 5 ಸಾವಿರ ನಾಗರಿಕರ ಉಪಸ್ಥಿತಿ!

ಗೆವರಾಯಿ (ಬೀಡ್ ಜಿಲ್ಲೆ) – ಗೆವರಾಯಿ ತಾಲೂಕಿನ ಬ್ರಹ್ಮಗಾಂವನಲ್ಲಿ ಶ್ರೀ ಮಾರುತಿ ದೇವಸ್ಥಾನದ ಎದುರು ಮಾಂಸದ ತುಂಡುಗಳು ಪತ್ತೆಯಾಗಿದ್ದರಿಂದ ಸದರಿ ಪ್ರದೇಶದಲ್ಲಿ ತೀವ್ರ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದು ಧಾರ್ಮಿಕ ಸೌಹಾರ್ದತೆಯನ್ನು ಕೆಡಿಸಲು ಯತ್ನಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಕಲಾಂಬಾ ಪೊಲೀಸರು ಅಪರಿಚಿತರ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೇ 29 ರಂದು ಬೆಳಗ್ಗೆ ದೇವಸ್ಥಾನಕ್ಕೆ ಪೂಜೆಗೆ ಹೋದ ವ್ಯಕ್ತಿಗಳಿಗೆ ದೇವಸ್ಥಾನದ ಮುಂದೆ ಮಾಂಸದ ತುಂಡುಗಳು ಕಂಡುಬಂದವು. ಈ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು, ಹಿಂದುತ್ವವಾದಿ ಸಂಘಟನೆಗಳು ಮತ್ತು ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದರು. ಹ.ಭ.ಪ. ದತ್ತಾಗಿರಿ ಮಹಾರಾಜ್ ಅವರ ಮಾರ್ಗದರ್ಶನದಲ್ಲಿ ಪಂಚಾಮೃತ ಮತ್ತು ಗಂಗಾಜಲದಿಂದ ಮೂರ್ತಿಯನ್ನು ಶುದ್ಧೀಕರಿಸಿ ಮಹಾ ಅಭಿಷೇಕ, ಪೂಜೆ ಮತ್ತು ಮಹಾ ಆರತಿಯನ್ನು ನೆರವೇರಿಸಲಾಯಿತು. ಸಕಲ ಹಿಂದೂ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ಮಹಾ ಆರತಿಯಲ್ಲಿ ಸುಮಾರು ೫ ಸಾವಿರ ನಾಗರಿಕರು ಪಾಲ್ಗೊಂಡಿದ್ದರು.
ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಚಕಲಾಂಬಾ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಪೊಲೀಸರು ಪಂಚನಾಮೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದರು. ಸಂಬಂಧಪಟ್ಟ ಮಾಂಸವು ಯಾವ ಪ್ರಾಣಿಯದ್ದು? ಎಂಬುದನ್ನು ಪತ್ತೆಹಚ್ಚಲು ವಿಧಿವಿಜ್ಞಾನ ಪ್ರಯೋಗಾಲಯದ ತಂಡದಿಂದ ಮಾದರಿಗಳನ್ನು ತಪಾಸಣೆಗೆ ಕಳುಹಿಸಲಾಗಿದೆ. ಈ ಘಟನೆಯ ನಂತರ, ದೋಷಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಕಲ ಹಿಂದೂ ಸಮಾಜ ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಚಕಲಾಂಬಾ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿ ಸಚಿನ ಇಂಗಳೆ ಮಾತನಾಡಿ, ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ತನಿಖೆಯ ಮೂಲಕ ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ ಎಂದು ತಿಳಿಸಿದ್ದಾರೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ