
ಹೂಗ್ಲಿ (ಬಂಗಾಳ) – ಇಲ್ಲಿ ತೃಣಮೂಲ ಕಾಂಗ್ರೆಸ್ಸಿನ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ಮೇಲೆ ಜನಸಮೂಹವು ಅಪರಿಚಿತ ವಸ್ತುವೊಂದನ್ನು ಎಸೆದಿದೆ. ಇದರಲ್ಲಿ ತಾವು ಗಾಯಗೊಂಡಿರುವುದಾಗಿ ಬ್ಯಾನರ್ಜಿ ತಿಳಿಸಿದ್ದಾರೆ. ಚಂಡಿತ್ಲಾ ಪೊಲೀಸ್ ಠಾಣೆಯ ಹೊರಗಡೆ ಈ ಘಟನೆ ನಡೆದಿದೆ. ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಲು ಹೋಗುತ್ತಿದ್ದರು. ಬಿಜೆಪಿಯ ಜನರು ಈ ದಾಳಿ ಮಾಡಿದ್ದಾರೆಂದು ಬ್ಯಾನರ್ಜಿ ಆರೋಪಿಸಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಕಲ್ಲು ಅಥವಾ ಚೆಂಡಿನಂತಹ ವಸ್ತುವನ್ನು ಎಸೆದು ನನ್ನನ್ನು ಗಾಯಗೊಳಿಸಲು ಯತ್ನಿಸಿದರು ಎಂದು ಅವರು ಆರೋಪಿಸಿದ್ದಾರೆ.
🔥 Stones Pelted at Trinamool Congress MP Kalyan Banerjee
Shortly after an attack on TMC leader Abhishek Banerjee, TMC MP Kalyan Banerjee has now faced the fury of an angry crowd, with stones reportedly being thrown at him.
As TMC loses its grip over Bengal, public resentment… pic.twitter.com/q82RSOskvL
— Sanatan Prabhat (@SanatanPrabhat) May 31, 2026
ಬ್ಯಾನರ್ಜಿ ಅವರಿಗೆ ಯಾವುದೇ ಗಾಯವಾಗಿಲ್ಲ. ಅವರು ಕೇವಲ ನಾಟಕವಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ. ತೃಣಮೂಲ ಕಾಂಗ್ರೆಸ್ಸಿನ ನಾಯಕ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಮೇಲೆ ಮೇ ೩೦ ರಂದು ಜನಸಮೂಹ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಬ್ಯಾನರ್ಜಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ದಾಳಿಯ ನಂತರ ತೃಣಮೂಲ ಕಾಂಗ್ರೆಸ್ಸಿನ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಡುಗಡೆ ಮಾಡಬೇಕೆಂದು ಮನವಿ ಸಲ್ಲಿಸಲು ಕಲ್ಯಾಣ್ ಬ್ಯಾನರ್ಜಿ ಚಂಡಿತ್ಲಾ ಪೊಲೀಸ್ ಠಾಣೆಗೆ ಹೋಗುತ್ತಿದ್ದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ