ಹಿಂದಿ ಪತ್ರಿಕೋದ್ಯಮದ 200ನೇ ವರ್ಷಾಚರಣೆ ಸಂಭ್ರಮ!

ಮುಂಬಯಿ – ಮಾತೃಭಾಷೆ ಮತ್ತು ಭಾರತೀಯ ಭಾಷೆಗಳ ಮೂಲಕ ಜ್ಞಾನ, ಸಂಸ್ಕೃತಿ ಹಾಗೂ ಮೌಲ್ಯಗಳ ಪರಂಪರೆಯು ಮುಂದಿನ ಪೀಳಿಗೆಗೆ ತಲುಪುತ್ತದೆ. ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮಾತೃಭಾಷಾ ಶಿಕ್ಷಣ, ಭಾರತೀಯ ಭಾಷೆಗಳ ಸಂವರ್ಧನೆ (ಪೋಷಣೆ) ಮತ್ತು ಮೌಲ್ಯಾಧಾರಿತ ಪತ್ರಿಕೋದ್ಯಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಹೇಳಿದರು. ‘ಮುಂಬಯಿ ಹಿಂದಿ ಪತ್ರಕರ್ತರ ಸಂಘ’ದ ವತಿಯಿಂದ ಆಯೋಜಿಸಲಾಗಿದ್ದ ಹಿಂದಿ ಪತ್ರಿಕೋದ್ಯಮದ 200ನೇ ವರ್ಷಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಮುಖ್ಯಮಂತ್ರಿಗಳು ಮಾತನ್ನು ಮುಂದುವರೆಸುತ್ತಾ, ‘‘ವಿಶ್ವದ ಬಹುತೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಲಾಗುತ್ತದೆ. ಇದರಿಂದಾಗಿ ಜ್ಞಾನವನ್ನು ಹೆಚ್ಚು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮಾತೃಭಾಷೆಗೆ ಆದ್ಯತೆ ನೀಡುವ ನೀತಿಯು ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರತಿಯೊಬ್ಬರೂ ತಮ್ಮ ಮಾತೃಭಾಷೆಯೊಂದಿಗೆ ಇತರ ಭಾರತೀಯ ಭಾಷೆಗಳ ಜ್ಞಾನವನ್ನೂ ಸಹ ಬೆಳೆಸಿಕೊಳ್ಳಬೇಕು’’ ಎಂದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein