ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು!

ಬೆಳಗಾವಿ – ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಾಲೆಗಳಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಶ್ರೀರಾಮ ಸೇನೆಯ ವತಿಯಿಂದ ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೇಸರಿ ವಸ್ತ್ರಗಳನ್ನು ವಿತರಿಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ನಗರದ ‘ಕನ್ನಡ ಸಾಹಿತ್ಯ ಭವನ’ದ ಆವರಣದಲ್ಲಿ ಜಮಾಯಿಸಿದ್ದರು. ಇದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರಿಗೆ ಕೇಸರಿ ವಸ್ತ್ರ ಹಂಚದಂತೆ ತಡೆದರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷ ರವಿಕುಮಾರ್ ಕೋಕಿತಕರ್, “ರಾಜ್ಯದ ಕಾಂಗ್ರೆಸ್ ಸರಕಾರವು ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಜಾಬ್ ಅನ್ನು ಬೆಂಬಲಿಸುತ್ತಿದೆ. ಇದರಿಂದ ಸಮಾಜದಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿವೆ. ಪ್ರತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದರೂ ಸರಕಾರವು ಒಂದು ನಿರ್ದಿಷ್ಟ ಸಮುದಾಯಕ್ಕೆ ಆದ್ಯತೆ ನೀಡುತ್ತಿದೆ ಮತ್ತು ಹಿಂದೂಗಳಿಗೆ ಅನ್ಯಾಯ ಮಾಡುತ್ತಿದೆ” ಎಂದರು. (ಸಂವಿಧಾನದ ಪ್ರಕಾರ ಜಾತ್ಯತೀತ ವ್ಯವಸ್ಥೆ ಇದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರವಿರುವಾಗ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್‌ಗೆ ಅನುಮತಿ ಏಕೆ? ಹೀಗೆ ಮಾಡುವ ಮೂಲಕ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮುಸ್ಲಿಮರ ತುಷ್ಟೀಕರಣ ಮಾಡುತ್ತಿದೆ! – ಸಂಪಾದಕರು)
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”