ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್‌

ಡಾ. ಬಿ. ಆರ್ ಅಂಬೇಡ್ಕರ್ ಹೆಸರಲ್ಲಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜಿ. ಪರಮೇಶ್ವರ್

ಬೆಂಗಳೂರು – ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಶಾಸಕ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು. ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

ಶ್ರೀ ವೀರ ಗಂಗಾಧರ ಅಜ್ಜಯ್ಯ ಇವರ ಪರಿಚಯ ?

ಶ್ರೀ ವೀರ ಗಂಗಾಧರ ಅಜ್ಜಯ್ಯನವರು (ಜಗದ್ಗುರು ಲಿಂ.ಶ್ರೀ. ವೀರ ಗಂಗಾಧರ ಶಿವಾಚಾರ್ಯ ಭಗವತ್ಪಾದರು) ಬಾಳೆಹೊನ್ನೂರಿನಲ್ಲಿರುವ ಶ್ರೀ ಜಗದ್ಗುರು ರಂಭಾಪುರಿ ಪೀಠದ ಪೂಜ್ಯ ಜಗದ್ಗುರುಗಳಾಗಿದ್ದರು. ಇವರು ತಮ್ಮ ದಾಸೋಹ ಮತ್ತು ಸಮಾಜಮುಖಿ ಕಾರ್ಯಗಳಿಂದ ‘ಕಾಯಕಯೋಗಿ’ ಎಂದು ಭಕ್ತರಿಂದ ಕರೆಯಲ್ಪಟ್ಟ ಅಪಾರ ಜನಪ್ರಿಯತೆಯ ಧಾರ್ಮಿಕ ಮುಖಂಡರಾಗಿದ್ದಾರೆ.

ಡಾ. ಬಿ. ಆರ್ ಅಂಬೇಡ್ಕರ್ ಹೆಸರಲ್ಲಿ ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಜಿ. ಪರಮೇಶ್ವರ್

ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಸಚಿವರಾಗಿದ್ದ ಡಾ ಜಿ ಪರಮೇಶ್ವರ್ ಅವರು ಇದೀಗ ಡಿಕೆ ಶಿವಕುಮಾರ್ ಕ್ಯಾಬಿನೆಟ್​​​ನಲ್ಲಿ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಪರಮೇಶ್ವರ್ ಅವರು ಡಾ, ಬಿಆರ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣವನಚ ಸ್ವೀಕರಿಸಿದರು. ಇನ್ನು ಒಟ್ಟು 5ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಡಾ.ಜಿ.ಪರಮೇಶ್ವರ್, 1989ರಲ್ಲಿ ಮಧುಗಿರಿಯಿಂದ ಸ್ಪರ್ಧಿಸಿ ವಿಧಾನಸಭೆ ಪ್ರವೇಶಿಸಿದ್ದರು. 1993ರಲ್ಲಿ ಮೊಯ್ಲಿ ಸಂಪುಟದಲ್ಲಿ ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1999 ಮತ್ತು 2004ರಲ್ಲಿ ಮಧುಗಿರಿಯಲ್ಲಿ ಮತ್ತೆ ಗೆಲುವು ಸಾಧಿಸಿದ್ದರು.
2008ರಲ್ಲಿ ಕ್ಷೇತ್ರ ಬದಲಾಯಿಸಿ ಕೊರಟಗೆರೆಯಿಂದ ಸ್ಪರ್ಧಿಸಿದ್ದರು. 2010ರಿಂದ 2018ರವರೆಗೂ KPCC ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಪರಮೇಶ್ವರ್, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಆಗಿದ್ದರು. ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ವಿಜ್ಞಾನತಂತ್ರಜ್ಞಾನ ಸಚಿವರಾಗಿ, ಬೆಂಗಳೂರು ಅಭಿವೃದ್ಧಿ ಸಚಿವರಾಗಿಯೂ ಪರಮೇಶ್ವರ್‌ ಸೇವೆ ಸಲ್ಲಿಸಿದ್ದಾರೆ.