
ಠಾಣೆ – ಅಂಬರನಾಥದಲ್ಲಿನ ಚಿಂಚಪಾಡಾ ಭಾಗದ ಕಲ್ಲುಗಣಿ ಪ್ರದೇಶದಲ್ಲಿನ ಕಸದ ರಾಶಿಯಲ್ಲಿ ಗೋವಂಶದ ಅವಶೇಷಗಳು ಪತ್ತೆಯಾಗಿವೆ. ಛಿದ್ರಛಿದ್ರಗೊಂಡ ಸ್ಥಿತಿಯಲ್ಲಿದ್ದ ಈ ಅವಶೇಷಗಳನ್ನು ಕಂಡು ಸ್ಥಳೀಯ ನಾಗರಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅಪರಿಚಿತರು ಗೋವಂಶವನ್ನು ಹತ್ಯೆ ಮಾಡಿ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಅವುಗಳನ್ನು ಇಲ್ಲಿ ತಂದು ಹಾಕಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸುತ್ತಿದ್ದಾರೆ. (ಇಂತಹ ಆಗ್ರಹವನ್ನು ಏಕೆ ಮಾಡಬೇಕಾಗುತ್ತದೆ? ಪೊಲೀಸರು ಸ್ವಯಂಪ್ರೇರಿತರಾಗಿ ಯಾವಾಗ ಕ್ರಮ ಕೈಗೊಳ್ಳುತ್ತಾರೆ? – ಸಂಪಾದಕರು)
ಕೆಲವು ತಿಂಗಳುಗಳ ಹಿಂದೆ ಅಂಬರನಾಥ ದಲ್ಲಿ ಗೋಮಾಂಸ ಮಾರಾಟ ಮತ್ತು ಅಕ್ರಮ ಪಶು ವಧಾಗೃಹಗಳ ವಿರುದ್ಧ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿ ಹಲವು ಕಡೆಗಳಲ್ಲಿ ಕ್ರಮ ಕೈಗೊಂಡಿದ್ದರು. ಆ ನಂತರವೂ ನಗರದಲ್ಲಿ ಗುಪ್ತ ರೀತಿಯಲ್ಲಿ ಗೋಹತ್ಯೆಗಳು ಮುಂದುವರಿದಿವೆ. (ಹೀಗೆ ನಡೆಯುತ್ತಿದೆ ಎಂದರೆ ಗೋಹತ್ಯೆ ಮಾಡುವವರ ಮೇಲೆ ಪೊಲೀಸರ ಯಾವುದೇ ಭಯವಿಲ್ಲ ಎಂದರ್ಥ. ಪೊಲೀಸರ ಕಾರ್ಯಾಚರಣೆ ನಿಲ್ಲುತ್ತಿದ್ದಂತೆಯೇ ಅವರು ಮತ್ತೆ ಸಕ್ರಿಯರಾಗುತ್ತಾರೆ ಎಂಬುದು ಇದರಿಂದ ಸಾಬೀತಾಗುತ್ತದೆ. – ಸಂಪಾದಕರು)
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”