
ಟೋಕಿಯೋ (ಜಪಾನ್) – ಜಪಾನ್‌ನ ಸೈತಾಮಾ ಪ್ರಾಂತ್ಯದ ಕವಾಗೋಯೆಯಲ್ಲಿ ಪಾಕಿಸ್ತಾನ ನಿರ್ಮಿಸಿರುವ ಮಸೀದಿಯು ಅಕ್ರಮವಾಗಿದೆ ಎಂದು ಅಲ್ಲಿನ ಆಡಳಿತ ತಿಳಿಸಿದ್ದು, ಅದನ್ನು ಧ್ವಂಸಗೊಳಿಸಲಾಗುವುದು ಎಂದು ಹೇಳಿದೆ. ಈ ಮಸೀದಿಯನ್ನು ಗುಡ್ಡಗಾಡು ಅರಣ್ಯ ಭೂಮಿ ಎಂದು ವರ್ಗೀಕರಿಸಲಾದ ೪,೫೦೦ ಚದರ ಮೀಟರ್ ವಿಸ್ತೀರ್ಣದ ಭೂಖಂಡದಲ್ಲಿ ನಿರ್ಮಿಸಲಾಗಿದ್ದು, ಸ್ಥಳೀಯ ಆಡಳಿತ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಕವಾಗೋಯೆಯಲ್ಲಿನ ಈ ಜಾಗವು ನಗರೀಕರಣ ನಿಯಂತ್ರಣ ವಲಯಕ್ಕೆ ಒಳಪಡುತ್ತದೆ. ಸ್ಥಳೀಯ ಅಧಿಕಾರಿಗಳಿಂದ ವಿಶೇಷ ಅನುಮತಿ ಪಡೆಯದ ಹೊರತು ಯಾವುದೇ ನಿರ್ಮಾಣ ಕಾರ್ಯ ಮಾಡುವಂತಿಲ್ಲ. ವಿಶೇಷವೆಂದರೆ, ಈ ಮಸೀದಿಯ ಉದ್ಘಾಟನೆಗೆ ಜಪಾನ್‌ನಲ್ಲಿನ ಪಾಕಿಸ್ತಾನದ ರಾಯಭಾರಿ ಅಬ್ದುಲ್ ಹಮೀದ್ ಉಪಸ್ಥಿತರಿದ್ದರು. ಹಾಗಾಗಿ ಈ ವಿಷಯ ಈಗ ಬೆಳಕಿಗೆ ಬಂದಿದೆ.
ಪಾಕಿಸ್ತಾನದಿಂದ ಸ್ಪಷ್ಟೀಕರಣ
ಸ್ಥಳೀಯ ಕಾನೂನನ್ನು ಪಾಲಿಸದೆ ನಿರ್ಮಿಸಲಾಗಿರುವ ಈ ಮಸೀದಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ. ಅನುಮತಿ ಪಡೆದೇ ಮಸೀದಿ ನಿರ್ಮಿಸಲಾಗಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಪಾಕಿಸ್ತಾನದ ರಾಯಭಾರಿ ಉದ್ಘಾಟನೆಗೆ ಹಾಜರಾಗಿದ್ದರು. ಮುಸ್ಲಿಂ ನಾಗರಿಕರು ಸ್ಥಳೀಯ ಆಡಳಿತಕ್ಕೆ ಸಹಕರಿಸಬೇಕು, ಎಂದು ಪಾಕಿಸ್ತಾನದ ಕಡೆಯಿಂದ ಮನವಿ ಮಾಡಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’