
ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸರ್ಕಾರವು ಭಾರತ ಸೇರಿದಂತೆ ಹಲವು ಪ್ರಮುಖ ದೇಶಗಳ ಉತ್ಪನ್ನಗಳ ಮೇಲೆ ಮತ್ತೊಮ್ಮೆ ಶೇ. ೧೦% ಅಥವಾ ಅದಕ್ಕಿಂತ ಹೆಚ್ಚಿನ ಹೆಚ್ಚುವರಿ ಆಮದು ಸುಂಕವನ್ನು ವಿಧಿಸುವ ಪ್ರಸ್ತಾಪವನ್ನು ಸಿದ್ಧಪಡಿಸಿದೆ. ಯಾವ ದೇಶಗಳಲ್ಲಿ ಬಲವಂತದ ಕಾರ್ಮಿಕರಿಂದ ಚಾಕರಿ ಮಾಡಿಸಿ ಸರಕುಗಳನ್ನು ಉತ್ಪಾದಿಸಲಾಗುತ್ತದೆಯೋ, ಅಂತಹ ಸರಕುಗಳ ಮೇಲೆ ಸುಂಕ ವಿಧಿಸಲಾಗುವುದೆಂದು ಅಮೆರಿಕ ಘೋಷಿಸಿದೆ. ಈ ನಿರ್ಧಾರದ ಪರಿಣಾಮ ಭಾರತ ಸೇರಿದಂತೆ ೬೦ ದೇಶಗಳ ಮೇಲೆ ಬೀರಲಿದೆ.
ಪಾಕಿಸ್ತಾನದ ಮೇಲೆ ಶೇ. ೧೦% ರಷ್ಟು ಆಮದು ಸುಂಕ
ಪಾಕಿಸ್ತಾನ, ಕೆನಡಾ, ಮೆಕ್ಸಿಕೋ, ತೈವಾನ್ ಮತ್ತು ಯುಕೆ ಸೇರಿದಂತೆ ಕೆಲವು ದೇಶಗಳ ಮೇಲೆ ಶೇ. ೧೦% ರಷ್ಟು ಹೆಚ್ಚುವರಿ ಆಮದು ಸುಂಕವನ್ನು ವಿಧಿಸಲಾಗುತ್ತದೆ. ಚೀನಾ, ಜಪಾನ್, ಭಾರತ, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಸ್ವಿಟ್ಜರ್ಲೆಂಡ್‌ನಂತಹ ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಸುಂಕ ವಿಧಿಸಲಾಗುವುದು. ಈ ಹೊಸ ಆಮದು ಸುಂಕ ತಕ್ಷಣವೇ ಜಾರಿಗೆ ತರಲಾಗುವುದಿಲ್ಲ. ಸಾರ್ವಜನಿಕರ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿದ ನಂತರವೇ ಈ ಕ್ರಮ ಕೈಗೊಳ್ಳಲಾಗುವುದು.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation