
ನವದೆಹಲಿ – ಮುಂಗಾರು ಮಳೆಯು ಜೂನ್ 4 ರಂದು ಕೇರಳ ರಾಜ್ಯಕ್ಕೆ ಆಗಮಿಸಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ಜೂನ್ 5 ರ ಸಂಜೆಯ ವೇಳೆಗೆ ಕೇರಳದ ಬಹುತೇಕ ಭಾಗವನ್ನು ಮುಂಗಾರು ಮಳೆಯು ಆವರಿಸಿಕೊಳ್ಳಲಿದೆ. ಹಾಗೂ ಮುಂದಿನ 3 ರಿಂದ 4 ದಿನಗಳಲ್ಲಿ ಕರ್ನಾಟಕದ ಕರಾವಳಿಯ ಮೂಲಕ ಅದು ಮುಂದೆ ಸಾಗಲಿದೆ. ಗೋವಾದ ಅಕ್ಷಾಂಶದವರೆಗೆ ತಲುಪಲು ಪೂರಕ ಪರಿಸ್ಥಿತಿ ಕಂಡುಬರುತ್ತಿದೆ. ಆದ್ದರಿಂದ ಜೂನ್ 10 ರೊಳಗೆ ಕೊಂಕಣ ಭಾಗದಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಜೂನ್ 10 ರ ನಂತರ ಮುಂಗಾರು ಮಳೆಯ ವೇಗ ಕಡಿಮೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಇಡೀ ಮಹಾರಾಷ್ಟ್ರಕ್ಕೆ ಮಳೆ ತಲುಪಲು ಜೂನ್ 20 ಆಗಬಹುದು. ಮುಂಬಯಿ-ಪುಣೆಯಲ್ಲಿ ಸಾಮಾನ್ಯವಾಗಿ ಜೂನ್ 10 ರಿಂದ 15 ರ ಅವಧಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ವರ್ಷ ಶೇಕಡಾ 90 ಕ್ಕಿಂತ ಕಡಿಮೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜೂನ್ ತಿಂಗಳಿನಲ್ಲಿ ಕಡಿಮೆ ಮಳೆಯಾಗಲಿದೆ. ಅದರ ನಂತರ ಜುಲೈ ಮತ್ತು ಆಗಸ್ಟ್ ತಿಂಗಳುಗಳಲ್ಲಿ ಮಳೆ ಹೆಚ್ಚಾಗಲಿದೆ. ಕೆಲವು ಭಾಗಗಳಲ್ಲಿ ಪ್ರವಾಹದ ಭೀತಿಯಿದ್ದರೆ, ಇನ್ನು ಕೆಲವು ಕಡೆ ಅತ್ಯಂತ ಕಡಿಮೆ ಮಳೆಯಾಗಬಹುದು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!