
ಹುಬ್ಬಳ್ಳಿ – ರಾಜ್ಯದಲ್ಲಿ ಡಿ.ಕೆ. ಶಿವಕುಮಾರ ಅವರ ನೇತೃತ್ವದ ಹೊಸ ಸರಕಾರ ಅಸ್ತಿತ್ವಕ್ಕೆ ಬಂದಿದೆ. ಅವರೊಂದಿಗೆ 13 ಸಚಿವರೂ ಕೂಡ ಸಚಿವ ಸ್ಥಾನದ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಯು.ಟಿ. ಖಾದರ್ ಸಚಿವರೂ ಸೇರಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಗಿದ ತಕ್ಷಣವೇ, ಮುಸಲ್ಮಾನರು ಸಚಿವ ಸಂಪುಟದಲ್ಲಿ ಇನ್ನುಳಿದ 4 ಮುಸಲ್ಮಾನರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಶಾಸಕರಾದ ಜಮೀರ್ ಅಹ್ಮದ್, ಎನ್.ಎ. ಹ್ಯಾರಿಸ್, ತನ್ವೀರ್ ಸೇಠ್ ಮತ್ತು ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಈ ಬೇಡಿಕೆಯನ್ನು ಹುಬ್ಬಳ್ಳಿಯಲ್ಲಿ ಮುಸಲ್ಮಾನ್ ಧರ್ಮಗುರುಗಳು ಮತ್ತು ರಾಜಕೀಯ ನಾಯಕರು ಒಟ್ಟಾಗಿ ಮಾಡಿದ್ದಾರೆ. ‘ಒಂದು ವೇಳೆ ನಮ್ಮ ಈ ಬೇಡಿಕೆಯನ್ನು ಈಡೇರಿಸದಿದ್ದರೆ, ಮುಂಬರುವ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಶಕ್ತಿ ಏನೆಂಬುದನ್ನು ತೋರಿಸಿಕೊಡಬೇಕಾಗುತ್ತದೆ’, ಎಂದು ಅವರು ಬೆದರಿಕೆಯನ್ನೂ ಹಾಕಿದ್ದಾರೆ.
ಮುಸಲ್ಮಾನರ ಮತಗಳಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ದಾವೆ !
ಸುದ್ದಿವಾಹಿನಿಗಳ ಮುಂದೆ ಮುಸಲ್ಮಾನ ಧರ್ಮಗುರುಗಳು, ರಾಜ್ಯದಲ್ಲಿ ಮುಸಲ್ಮಾನರ ಒಗ್ಗಟ್ಟಿನ ಮತದಾನದಿಂದಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಹೇಳಿದ್ದಾರೆ. (ಹಿಂದೂಗಳು ಇದನ್ನು ಒಪ್ಪುತ್ತಾರೆಯೇ? ಮುಸಲ್ಮಾನರ ಮತಗಳಿಂದ ಆರಿಸಿ ಬಂದಿರುವ ಕಾಂಗ್ರೆಸ್ ಹಿಂದೂಗಳನ್ನು ತುಚ್ಛವಾಗಿ ಕಾಣುತ್ತದೆ ಎಂಬುದು ಹಿಂದೂಗಳಿಗೆ ಯಾವಾಗ ತಿಳಿಯಲಿದೆ? – ಸಂಪಾದಕರು) ಆದ್ದರಿಂದ ಕಾಂಗ್ರೆಸ್ ಪಕ್ಷವು ಮುಸಲ್ಮಾನ್ ಸಮಾಜದ ಋಣವನ್ನು ತೀರಿಸುವುದು ಅನಿವಾರ್ಯವಾಗಿದೆ. ಮುಂಬರುವ ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ನಾಯಕತ್ವವು ತಕ್ಷಣವೇ ನಿರ್ಧಾರ ತೆಗೆದುಕೊಳ್ಳಬೇಕು; ಇಲ್ಲದಿದ್ದರೆ ಪಕ್ಷಕ್ಕೆ ದೊಡ್ಡ ರಾಜಕೀಯ ಪೆಟ್ಟು ಬೀಳುವುದು ಖಚಿತ ಎಂಬ ಎಚ್ಚರಿಕೆಯನ್ನೂ ಅವರು ನೀಡಿದ್ದಾರೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!