ರೋಗಿಗಳನ್ನು ಬಿಟ್ಟು ಓಡಿಹೋದ ವೈದ್ಯರು ಮತ್ತು ಸಿಬ್ಬಂದಿ!

ಮುಜಫ್ಫರಪುರ (ಬಿಹಾರ) – ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆಯು ಮೇ 3 ರ ರಾತ್ರಿ ನಡೆದಿದೆ. ಸ್ಥಳೀಯರ ಹೇಳುವಂತೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಈ ಘಟಕವು 5 ನೇ ಮಹಡಿಯಲ್ಲಿದ್ದರಿಂದ ಅಗ್ನಿಶಾಮಕ ದಳದವರಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ತೊಂದರೆಯಾಯಿತು. ಬೆಂಕಿ ಹೊತ್ತಿಕೊಂಡ ತಕ್ಷಣವೇ ನೀರಿನ ವ್ಯವಸ್ಥೆ ಮಾಡಿದ್ದರೆ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದಿತ್ತು ಎಂದು ಜನರು ಹೇಳುತ್ತಿದ್ದಾರೆ.
1.ಬೆಂಕಿ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ರೋಗಿಗಳನ್ನು ಇದ್ದ ಸ್ಥಿತಿಯಲ್ಲೇ ಬಿಟ್ಟು ಓಡಿಹೋದರು ಎಂದು ರೋಗಿಗಳ ಕುಟುಂಬಸ್ಥರು ಆರೋಪಿಸಿದ್ದಾರೆ.
2.ಅಗ್ನಿಶಾಮಕ ದಳದ ಅಧಿಕಾರಿಗಳ ತಂಡ ಸ್ಥಳಕ್ಕೆ ತಲುಪಿದಾಗ, ಆಸ್ಪತ್ರೆಯ ಹೆಚ್ಚಿನ ಸಿಬ್ಬಂದಿಗಳು ಅಲ್ಲಿ ಇರಲಿಲ್ಲ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
3.ಮುಜಫ್ಫರಪುರದ ಜಿಲ್ಲಾಧಿಕಾರಿ ಸುಬ್ರತಾ ಕುಮಾರ ರವರು ಮಾತನಾಡಿ, ನಿರ್ಲಕ್ಷ್ಯ ವಹಿಸಿದ ಆಸ್ಪತ್ರೆ ಆಡಳಿತ ಮಂಡಳಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ತಮ್ಮ ರೋಗಿಗಳು ವಾರ್ಡ್‌ಗಳಿಂದ ಕಾಣೆಯಾಗಿದ್ದಾರೆ ಎಂದು ಕೆಲವು ಸಂಬಂಧಿಕರು ಆರೋಪಿಸಿದ್ದು, ಪ್ರತಿಯೊಂದು ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ.
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್