ಮನೆ ಮಾಲೀಕನ ಮಾತಿನ ಮೇರೆಗೆ ಮಂದಿರದಲ್ಲಿ ಪ್ರಾರ್ಥನೆ ಮಾಡಿದ ಹಿನ್ನೆಲೆಯಲ್ಲಿ ಮನೆ ಮಾಲೀಕನ ವಿರುದ್ಧವೂ ಮೊಕದ್ದಮೆ ದಾಖಲು!

ಬುಲಂದ್‌ಶಹರ್ (ಉತ್ತರ ಪ್ರದೇಶ) – ಇಲ್ಲಿನ ಒಲಿನಾ ಗ್ರಾಮದ ಹನುಮಾನ್ ಮಂದಿರವೊಂದರಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಎಂಬಾತನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಅಸರ್ ಮೊಹಮ್ಮದ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.
ಲಭ್ಯವಿರುವ ಮಾಹಿತಿ ಪ್ರಕಾರ, ರಾಜ್‌ಕುಮಾರ್ ಎಂಬ ವ್ಯಕ್ತಿಯ ಮನೆ ನಿರ್ಮಾಣದ ಕೆಲಸ ನಡೆಯುತ್ತಿತ್ತು ಮತ್ತು ಅಲ್ಲಿ ಅಸರ್ ಮೊಹಮ್ಮದ್ ಮೇಸ್ತ್ರಿಯಾಗಿ ಕೆಲಸ ಮಾಡುತ್ತಿದ್ದನು. ಮಧ್ಯಾಹ್ನ ಉಳಿದ ಕಾರ್ಮಿಕರು ಊಟಕ್ಕೆ ಹೋದಾಗ, ಅಸರ್ ಮೊಹಮ್ಮದ್ ನಿರ್ಮಾಣ ಹಂತದಲ್ಲಿದ್ದ ಮನೆಯ ಎದುರಿಗಿದ್ದ ಹನುಮಾನ್ ಮಂದಿರದಲ್ಲಿ ಪ್ರಾರ್ಥನೆ ಮಾಡಿದ್ದನು. ರಾಜ್‌ಕುಮಾರ್ ನೀಡಿದ ಸೂಚನೆಯ ಮೇರೆಗೇ ಆತ ಹೀಗೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಮನೆ ಮಾಲೀಕ ರಾಜ್‌ಕುಮಾರ್ ವಿರುದ್ಧವೂ ಮೊಕದ್ದಮೆ ದಾಖಲಿಸಲಾಗಿದೆ. ಈ ಘಟನೆಯಿಂದಾಗಿ ಗ್ರಾಮದಲ್ಲಿ ತೀವ್ರ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!