ವಿದೇಶಿ ಉಗ್ರರ ಜೊತೆ ಸೇರಿ ಭಯೋತ್ಪಾದಕ ದಾಳಿ ನಡೆಸುವ ಸಂಚು!

ತುಮಕೂರು – ವಿದೇಶಿ ಉಗ್ರರೊಂದಿಗೆ ನಿರಂತರ ಸಂಪರ್ಕ ಬೆಳೆಸಿಕೊಂಡು ಹಲವು ಭಯೋತ್ಪಾದಕ ದಾಳಿಗೆ ಸಂಚು ರೂಪಿಸುತ್ತಿದ್ದ ತುಮಕೂರಿನ ಶ್ರೀರಾಮನಗರದ ನಿವಾಸಿ ಅಲ್ಲಾ ಬಕ್ಷ್‌ನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ. ಈತ ತನ್ನ ‘ಎಕ್ಸ್’ (ಟ್ವಿಟರ್) ಖಾತೆಯ ಮೂಲಕ ದೇಶದ ಭದ್ರತೆಗೆ ಧಕ್ಕೆ ತರುವ ರೀತಿಯಲ್ಲಿ ಉಗ್ರರೊಂದಿಗೆ ಸಂಭಾಷಣೆ ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲಾ ಬಕ್ಷ್‌ನ ಪ್ರತಿಯೊಂದು ಚಲನವಲನದ ಮೇಲೆ ಕಣ್ಣಿಟ್ಟಿದ್ದ ಕೇಂದ್ರ ತನಿಖಾ ಸಂಸ್ಥೆ ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿತ್ತು.
ಈ ಮಾಹಿತಿಯ ಆಧಾರದ ಮೇಲೆ ತುಮಕೂರು ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅವಿನಾಶ್ ಅವರ ತಂಡವು ಅಲ್ಲಾ ಬಕ್ಷ್‌ನನ್ನು ಬಂಧಿಸಿದೆ. ಈತನೊಂದಿಗೆ ಮತ್ತೊಬ್ಬ ಸಹಚರ ಸಂಪರ್ಕದಲ್ಲಿದ್ದ ಮಾಹಿತಿ ಕೂಡ ಹೊರಬಂದಿದೆ. ಅಲ್ಲಾ ಬಕ್ಷ್ ಬಂಧನಕ್ಕೊಳಗಾಗುತ್ತಿದ್ದಂತೆ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇಂದ್ರ ತನಿಖಾ ಸಂಸ್ಥೆಯು ಅಲ್ಲಾ ಬಕ್ಷ್‌ನೊಂದಿಗೆ ನಿಕಟ ಸಂಬಂಧ ಹೊಂದಿದ್ದವರ ಮಾಹಿತಿಯನ್ನು ಕಲೆಹಾಕುತ್ತಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!