ಪುಣೆ: ‘ಕಾರ್ಪೊರೇಟ್ ಜಿಹಾದ್’ ಪ್ರಕರಣದಲ್ಲಿ ‘ವಿಪ್ರೋ’ ಸಂಸ್ಥೆಯ ಸ್ಪಷ್ಟನೆ !

ಪುಣೆ – ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿನ ‘ಮತಾಂತರ ಜಿಹಾದ್’ ಪ್ರಕರಣಗಳು ಮುನ್ನಲೆಗೆ ಬರುತ್ತಿವೆ. ‘ವಿಪ್ರೋ’ ಸಂಸ್ಥೆಯಲ್ಲಿನ ಮಾಜಿ ಮಹಿಳಾ ಉದ್ಯೋಗಿಯೊಬ್ಬರು ‘ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ತಮ್ಮನ್ನು ಕೆಲಸದಿಂದ ವಜಾಗೊಳಿಸಲಾಗಿದೆ’ ಎಂದು ‘ಹಿಂದೂ ಜನಜಾಗೃತಿ ಸಮಿತಿ’ಯ ಮಾಧ್ಯಮಗಳ ಮೂಲಕ ಪತ್ರಿಕಾಗೋಷ್ಠಿಯಲ್ಲಿ ದೂರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ‘ವಿಪ್ರೋ’ ಸಂಸ್ಥೆಯು ಸ್ಪಷ್ಟನೆ ನೀಡಿದೆ. ‘ವಿಪ್ರೋ’ ಸಂಸ್ಥೆಯು, ‘‘ನಮ್ಮ ಸಂಸ್ಥೆಯಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಅವರ ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ. ಯಾವುದೇ ರೀತಿಯ ದುರ್ನಡತೆಯನ್ನು ಸಹಿಸದಿರುವುದು ನಮ್ಮ ನೀತಿಯಾಗಿದೆ. ಯಾವುದೇ ತಪ್ಪು ನಡವಳಿಕೆ, ತಾರತಮ್ಯ, ಕಿರುಕುಳ ಅಥವಾ ವ್ಯಕ್ತಿಯ ಮೂಲಭೂತ ಹಕ್ಕು ಮತ್ತು ಸ್ವಾತಂತ್ರ್ಯವನ್ನು ಕಸಿಯುವ ವಿಷಯಗಳಿಗೆ ಸಂಸ್ಥೆಯಲ್ಲಿ ಸ್ಥಾನವಿಲ್ಲ.
ಈ ಪ್ರಕರಣದಲ್ಲಿ ನಾವು ತನಿಖಾ ಸಂಸ್ಥೆಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ. ಎಲ್ಲಾ ದಾಖಲೆಗಳನ್ನು ಪೊಲೀಸರಿಗೆ ಸಲ್ಲಿಸಿದ್ದೇವೆ. ತನಿಖೆ ನಡೆಯುತ್ತಿರುವುದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ನಾವು ಉದ್ಯೋಗಿಗಳಿಗೆ ಸುರಕ್ಷಿತ ವಾತಾವರಣವನ್ನು ಒದಗಿಸಲು ಬದ್ಧರಾಗಿದ್ದೇವೆ’’ ಎಂದು ಹೇಳಿದೆ.
ಏನಿದು ಪ್ರಕರಣ?
ಸಂತ್ರಸ್ತೆ ಮಹಿಳೆಯೊಬ್ಬರು ‘ವಿಪ್ರೋ’ದಲ್ಲಿ ಕೆಲಸ ಮಾಡುತ್ತಿದ್ದಾಗ, ಆಕೆಯ ಮೇಲೆ ಇಸ್ಲಾಂ ಧರ್ಮವನ್ನು ಸ್ವೀಕರಿಸಲು ಮತ್ತು ಒಬ್ಬ ಮುಸ್ಲಿಂ ವ್ಯಕ್ತಿಯೊಂದಿಗೆ ದೈಹಿಕ ಸಂಬಂಧ ಹೊಂದಲು ತೀವ್ರ ಮಾನಸಿಕ ಒತ್ತಡ ಹೇರಲಾಗಿತ್ತು. ಆದರೆ ಸಂತ್ರಸ್ತೆ ಇದನ್ನು ನಿರಾಕರಿಸಿ, ಸಂಸ್ಥೆಯ ಆಡಳಿತ ಮಂಡಳಿಗೆ ದೂರು ನೀಡಿದ್ದಳು; ಆದರೆ ಆಡಳಿತ ಮಂಡಳಿಯು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ ಸಂತ್ರಸ್ತೆಯನ್ನೇ ಕೆಲಸದಿಂದ ತೆಗೆದುಹಾಕಿತು. ಇದುವರೆಗೂ ಈ ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿಲ್ಲ ಎಂದು ವರದಿಯಾಗಿದೆ.
ಹಸು ಹಿಂದೂಗಳಿಗೆ ಪವಿತ್ರ: ಅದರ ಹತ್ಯೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಬಹುದು! – ಗುಜರಾತ್ ಹೈಕೋರ್ಟ್
ಶನಿಶಿಂಗಣಾಪುರದ ಶ್ರೀ ಶನಿದೇವರ ಮೂರ್ತಿಯ ಸಂರಕ್ಷಣೆಗಾಗಿ ವಜ್ರಲೇಪನ ಮಾಡಲಾಗುವುದು !
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!