
ಮಾಸ್ಕೋ (ರಷ್ಯಾ) – ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಮತ್ತೊಮ್ಮೆ ಭಾರತ ಮತ್ತು ಇಲ್ಲಿನ ಜನರನ್ನು ಬಹಿರಂಗವಾಗಿ ಶ್ಲಾಘಿಸಿದ್ದಾರೆ. ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಹಲವು ದಶಕಗಳಷ್ಟು ಹಳೆಯದಾಗಿವೆ. ನಮ್ಮ ನಡುವಿನ ಬಾಂಧವ್ಯವು ವಿಶ್ವಾಸ ಮತ್ತು ಸಹೋದರತ್ವದ್ದಾಗಿದ್ದು, ಇದು ಕಾಲಾಂತರದಲ್ಲಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಅವರು ಹೇಳಿದ್ದಾರೆ. ಭಾರತೀಯರು ಅತ್ಯಂತ ಪ್ರತಿಭಾವಂತರು ಮತ್ತು ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ ಎಂದು ಪುಟಿನ್ ಉಲ್ಲೇಖಿಸಿದ್ದಾರೆ. ಕೋಡಿಂಗ್ ಮತ್ತು ತಾಂತ್ರಿಕ ಕ್ಷೇತ್ರಗಳಲ್ಲಿ ಭಾರತೀಯರ ಕೌಶಲ್ಯದ ಮೇಲೆ ಬೆಳಕು ಚೆಲ್ಲುತ್ತಾ ಅವರು, ‘ಭಾರತೀಯರ ಸಾಮರ್ಥ್ಯದಿಂದಾಗಿ ಅವರಿಗೆ ವಿಶ್ವಾದ್ಯಂತ ಗೌರವ ಮತ್ತು ಗುರುತು ಸಿಕ್ಕಿದೆ. ಭಾರತೀಯ ವೃತ್ತಿಪರರು ಮಾಹಿತಿ ತಂತ್ರಜ್ಞಾನ, ಸಾಫ್ಟವೇರ್ ಅಭಿವೃದ್ಧಿ ಮತ್ತು ಇತರ ಆಧುನಿಕ ಕ್ಷೇತ್ರಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ. ಅವರು ಮಾಡಿರುವ ಸಾಧನೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ’ ಎಂದು ತಿಳಿಸಿದ್ದಾರೆ.
ಅವರು ಮಾತು ಮುಂದುವರೆಸುತ್ತಾ,
1. ಭಾರತೀಯ ಪ್ರತಿಭೆ, ಶಿಕ್ಷಣ ಮತ್ತು ತಾಂತ್ರಿಕ ಕೌಶಲ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮಾನ್ಯತೆ ದೊರೆತಿದೆ. 1947 ರಲ್ಲಿ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾದಾಗಿನಿಂದ ಉಭಯ ದೇಶಗಳ ನಡುವಿನ ಬಾಂಧವ್ಯವು ನಿರಂತರವಾಗಿ ಬಲಗೊಂಡಿದೆ ಎಂದು ಪುಟಿನ್ ಉಲ್ಲೇಖಿಸಿದ್ದಾರೆ.
2. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ತನ್ನ ರಾಷ್ಟ್ರೀಯ ಹಿತಾಸಕ್ತಿಗಳ ಆಧಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ ಮತ್ತು ಯಾವುದೇ ಬಾಹ್ಯ ಒತ್ತಡಗಳಿಗೆ ಮಣಿಯುವುದಿಲ್ಲ.
3. ಭಾರತದ ಮೇಲೆ ನಿರ್ಬಂಧಗಳನ್ನು ಹೇರುವ ಯಾವುದೇ ಪ್ರಯತ್ನವು ತಿರುಗು ಬಾಣವಾಗಬಹುದು; ಏಕೆಂದರೆ ಈ ದೇಶವು ತನ್ನ ಸ್ವಂತ ನೀತಿಗಳು ಮತ್ತು ಆರ್ಥಿಕ ಹಿತಾಸಕ್ತಿಗಳಿಗೆ ಅನುಗುಣವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಶಕ್ತವಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation