ಭಟ್ಕಳ ಮೂರಿನಕಟ್ಟೆ ಧ್ವಂಸ ಪ್ರಕರಣ
ಹಿಂದೂಗಳ ೩೦ ಕ್ಕೂ ಹೆಚ್ಚು ಸಮುದಾಯಗಳ ನಾಯಕರು ಭಾಗಿ

ಭಟ್ಕಳ – ಹಿಂದೂಗಳ ಶ್ರದ್ಧಾಕೇಂದ್ರವಾಗಿರುವ ಇಲ್ಲಿನ ‘ಮೂರಿನಕಟ್ಟೆ’ಯನ್ನು ಮೇ ೨೪ ರ ರಾತ್ರಿ ಮುಸ್ಲಿಂ ಸಮುದಾಯದ ಗುಂಪೊಂದು ಧ್ವಂಸಗೊಳಿಸಿತ್ತು. ಇದನ್ನು ಪ್ರತಿಭಟಿಸಿ, ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣಾತಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಹಿಂದುತ್ವನಿಷ್ಠ ಸಂಘಟನೆಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ ಮತ್ತು ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿಭಟನೆಯಲ್ಲಿ ತಾಲೂಕಿನ ಮೂಲೆ ಮೂಲೆಗಳಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಾಗೂ ಹಿಂದೂಗಳ ೩೦ ಕ್ಕೂ ಹೆಚ್ಚು ಸಮುದಾಯಗಳ ಮುಖಂಡರು ಭಾಗವಹಿಸಿದ್ದರು. ಇಲ್ಲಿನ ಶ್ರೀ ಚನ್ನಪಟ್ಟಣ ಹನುಮಾನ್ ದೇವಸ್ಥಾನದ ಆವರಣದಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ತಾಲೂಕು ಆಡಳಿತ ಸೌಧದ ಆವರಣದಲ್ಲಿ ಜಮಾಯಿಸಿದ್ದ ಸಾವಿರಾರು ಜನರನ್ನು ಉದ್ದೇಶಿಸಿ ಮಾತನಾಡಿದ ‘ಹಿಂದೂ ಜಾಗರಣ ವೇದಿಕೆ’ಯ ದಕ್ಷಿಣ ಪ್ರಾಂತ ಪ್ರಮುಖ ಪುಂಡಲೀಕ ದಳವಾಯಿ, ‘ನಮ್ಮ ಮೂರಿನಕಟ್ಟೆಯನ್ನು ೩ ಸಾವಿರ ಜನರು ಬಂದು ಧ್ವಂಸಗೊಳಿಸಿರುವುದು ಅಸಹನೀಯವಾಗಿದೆ. ನಮ್ಮ ಧಾರ್ಮಿಕ ನಂಬಿಕೆಯ ಕೇಂದ್ರವಾಗಿರುವ ಈ ಕಟ್ಟೆಯನ್ನು ಮರುನಿರ್ಮಾಣ ಮಾಡುವುದು ನಮಗೆ ಯಾವುದೇ ಕಷ್ಟದ ಕೆಲಸವಲ್ಲ. ರಾಜ್ಯದ ಹೊರಗಿನಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರನ್ನು ಕರೆತಂದು ಅದನ್ನು ನಿರ್ಮಿಸುವ ಶಕ್ತಿ ನಮ್ಮಲ್ಲಿದೆ; ಆದರೆ ಭಟ್ಕಳದ ಹಿಂದೂ ಸಂಘಟನೆಗಳು ‘ನಾವೇ ಅದನ್ನು ಸ್ವತಃ ನಿರ್ಮಿಸುತ್ತೇವೆ’ ಎಂದು ಹೇಳಿದ್ದರಿಂದ ನಾವು ಶಾಂತರಾಗಿದ್ದೇವೆ,’ ಎಂದರು.
ಹಿಂದೂ ಜಾಗರಣ ವೇದಿಕೆಯ ಪ್ರಮುಖ ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನಾಡಿ,

“ಮೂರಿನಕಟ್ಟೆ ಧ್ವಂಸವನ್ನು ಖಂಡಿಸಲು ಸದ್ಯಕ್ಕೆ ಸಂಘಟನೆಗಳು ಮಾತ್ರ ಮುಂದೆ ಬಂದಿವೆ. ಒಂದು ವೇಳೆ ನಮ್ಮ ಸಮಾಜವೇ ರಸ್ತೆಗಿಳಿದರೆ, ಪೊಲೀಸರಿಗೆ ಬಲಪ್ರಯೋಗ ಮಾಡಲು ಸಾಧ್ಯವಾಗುವುದಿಲ್ಲ. ನಮ್ಮ ಪ್ರತಿಭಟನೆಗಾಗಿ ಸಾವಿರಾರು ಪೊಲೀಸರನ್ನು ನಿಯೋಜಿಸುವ ಸರಕಾರ, ಮತಾಂಧರ ವಿರುದ್ಧ ಏನು ಕ್ರಮ ಕೈಗೊಂಡಿದೆ? ಎಂಬುದನ್ನು ಏಕೆ ಸ್ಪಷ್ಟಪಡಿಸುತ್ತಿಲ್ಲ?” ಎಂದು ಪ್ರಶ್ನಿಸಿದ ಅವರು, ಮುಸ್ಲಿಂ ಸಂಘಟನೆಗಳ ಮುಖ್ಯಸ್ಥರ ಮೇಲೆಯೂ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಶ್ರೀಕಾಂತ್ ಶೆಟ್ಟಿ ಕಾರ್ಕಳ ಮಾತನ್ನು ಮುಂದುವರೆಸುತ್ತಾ, “ನಮ್ಮ ಸಮಾಜದ ಧಾರ್ಮಿಕ ಶ್ರದ್ಧಾಕೇಂದ್ರವನ್ನು ಧ್ವಂಸಗೊಳಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಹಾಗೆಯೇ ಅವರಿಗೆ ಪ್ರಚೋದನೆ ನೀಡಿದವರ ಮೇಲೆಯೂ ಕಾನೂನು ರೀತ್ಯಾ ಸೂಕ್ತ ಕ್ರಮ ಕೈಗೊಳ್ಳಬೇಕು. ಭಟ್ಕಳ ಗಲಭೆಯ ತನಿಖೆ ನಡೆಸಿದ ನ್ಯಾಯಮೂರ್ತಿ ಜಗನ್ನಾಥ್ ಶೆಟ್ಟಿ ಆಯೋಗದ ವರದಿಯಲ್ಲಿ ‘ಭಟ್ಕಳದಲ್ಲಿ ಪಾಕಿಸ್ತಾನದ ಐ.ಎಸ್.ಐ. (ಇಂಟರ್ ಸರ್ವಿಸಸ್ ಇಂಟೆಲಿಜೆನ್ಸ್ – ಅಂತರರಾಷ್ಟ್ರೀಯ ಗುಪ್ತಚರ ಸಂಸ್ಥೆ) ಸಂಪರ್ಕದಲ್ಲಿರುವ ಜನರಿದ್ದಾರೆ ಮತ್ತು ‘ಇಂಡಿಯನ್ ಮುಜಾಹಿದ್ದೀನ್’ ಎಂಬ ನಿಷೇಧಿತ ಜಿಹಾದಿ ಭಯೋತ್ಪಾದಕ ಸಂಘಟನೆ ಜನ್ಮ ತಳೆದಿದ್ದೇ ಇಲ್ಲಿ’ ಎಂದು ಹೇಳಿರುವಾಗ ಕಾನೂನು ಎಲ್ಲಿದೆ?” ಎಂದು ಪ್ರಶ್ನಿಸಿದರು.

ಈ ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಪ್ರಮುಖ ಸುಬ್ರಹ್ಮಣ್ಯ ಕುಮಟಾ, ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನಿಲ್ ನಾಯ್ಕ, ನಾಮಧಾರಿ ಸಮಾಜದ ಅಧ್ಯಕ್ಷ ಅರುಣ್ ನಾಯ್ಕ, ಹಿಂದೂ ಸಂಘಟನೆಯ ಶ್ರೀಕಾಂತ್ ನಾಯ್ಕ, ಗೋವಿಂದ ನಾಯ್ಕ, ಕೃಷ್ಣ ನಾಯ್ಕ ಆಸರಕೇರಿ, ಶ್ರೀನಿವಾಸ ನಾಯ್ಕ, ದಿನೇಶ್ ನಾಯ್ಕ, ರಾಜೇಶ್ ನಾಯ್ಕ, ಜಯಂತ ನಾಯ್ಕ, ಶೈಲೇಂದ್ರ ಜೈನ್, ‘ಹುರುಳಿಸಾಲು ಯುನಿಟ್’ನ ಸುಬ್ರಾಯ ನಾಯ್ಕ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹಿಂದೂ ಜಾಗರಣ ವೇದಿಕೆಯ ತಾಲೂಕು ಅಧ್ಯಕ್ಷ ರಾಮಕೃಷ್ಣ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿದರು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath