ಡಹಾಣು (ಪಾಲಘರ ಜಿಲ್ಲೆ) ಇಲ್ಲಿ ಲವ್ ಜಿಹಾದ್; ಹಿಂದುತ್ವನಿಷ್ಠ ಸಂಘಟನೆಗಳು ಆಕ್ರಮಣಕಾರಿ !
ಆರೋಪಿಯ ಅನಧಿಕೃತ ಆಸ್ತಿಗಳ ಮೇಲೆ ಬುಲ್ಡೋಜರ್ ಚಲಾಯಿಸಲು ಆಗ್ರಹ !

ಪಾಲಘರ್ – ಡಹಾಣು ಜಿಲ್ಲೆಯಲ್ಲಿ ಇಬ್ಬರು ಸ್ವಂತ ಹಿಂದೂ ಸಹೋದರಿಯರನ್ನು ಯುವಕನೊಬ್ಬ ಪ್ರೀತಿಯ ಜಾಲಕ್ಕೆ ಸಿಲುಕಿಸಿ ಅವರ ಅಶ್ಲೀಲ ಚಿತ್ರಗಳನ್ನು ತೆಗೆದಿದ್ದಾನೆ. ಅವುಗಳ ಚಿತ್ರೀಕರಣ ಮಾಡಿ ಅವರಿಗೆ ಬೆದರಿಕೆ ಹಾಕಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 1 ರಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದಲ್ಲಿ ಹಿಂದುತ್ವನಿಷ್ಠ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಮುಖಂಡರು ಆಕ್ರಮಣಕಾರಿಯಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ.
1. ಆರೋಪಿಯು ಹಿರಿಯ ಹುಡುಗಿಯೊಂದಿಗೆ ಸ್ನೇಹ ಬೆಳೆಸಿ ಆಕೆಯನ್ನು ಪ್ರೀತಿಯ ಜಾಲಕ್ಕೆ ಸಿಲುಕಿಸಿದನು ಮತ್ತು ನಂತರ ಆಕೆಯ ಅಪ್ರಾಪ್ತ ವಯಸ್ಸಿನ ಕಿರಿಯ ಸಹೋದರಿಯೊಂದಿಗೂ ನಿಕಟತೆ ಬೆಳೆಸಿದನು. ಅವರಿಗೆ ಬೆದರಿಕೆ ಹಾಕಿ ಅವರ ಮೇಲೆ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ಸಂತ್ರಸ್ತ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.
2. ಪಾಲಘರ್ ಮತ್ತು ಡಹಾಣು ಪರಿಸರದ ಬಡ ಹಾಗೂ ಆದಿವಾಸಿ ಹಿಂದೂ ಹುಡುಗಿಯರನ್ನು ಮರುಳುಗೊಳಿಸಿ ಅವರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. (ಈ ಘಟನೆಗಳ ಕುರಿತು ಪೊಲೀಸರು ತನಿಖೆ ನಡೆಸಿ ಸತ್ಯವನ್ನು ಹೊರತರುತ್ತಾರೆಯೇ ? – ಸಂಪಾದಕರು)
3. ‘ಲವ್ ಜಿಹಾದ್’ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಭಾಜಪ ನಾಯಕಿ ಚಿತ್ರಾ ವಾಗ್ ಅವರು ಡಹಾಣು ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಅವರು ಆರೋಪಿಯ ಅನಧಿಕೃತ ಆಸ್ತಿಗಳ ಮೇಲೆ ತಕ್ಷಣವೇ ಬುಲ್ಡೋಜರ್ ಚಲಾಯಿಸಬೇಕೆಂದು ಆಗ್ರಹಿಸಿದ್ದಾರೆ. ಈ ಘಟನೆಯ ಕುರಿತು ಮುಖ್ಯಮಂತ್ರಿ ಮತ್ತು ಗೃಹಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಅವರು ತಿಳಿಸಿದರು.
4. ‘ಗುಜರಾತ ರಾಜ್ಯದಂತೆ ಮಹಾರಾಷ್ಟ್ರದಲ್ಲೂ ಅಂತರ್ಧರ್ಮೀಯ ವಿವಾಹಗಳಿಗೆ ಸಂಬಂಧಿಸಿದಂತೆ ಹುಡುಗಿಯ ಕುಟುಂಬದವರಿಗೆ ಮೊದಲೇ ಅಧಿಕೃತ ಮಾಹಿತಿ ನೀಡುವ ಕಠಿಣ ಕಾನೂನನ್ನು ಜಾರಿಗೆ ತರಬೇಕು’, ಎಂದೂ ಚಿತ್ರಾ ವಾಗ್ ಆಗ್ರಹಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!