ಪೊಲೀಸರು ಹಿಂದುತ್ವನಿಷ್ಠರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಿದರು

ವಿಜಯಪುರ – ಶಾಲೆ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಕಾಂಗ್ರೆಸ್ ಸರಕಾರವು ಅನುಮತಿ ನೀಡಿರುವುದನ್ನು ವಿರೋಧಿಸಿ ಇಲ್ಲಿನ ಹಿಂದೂ ವಿದ್ಯಾರ್ಥಿಗಳಿಗೆ ‘ಕೇಸರಿ ಶಾಲು ವಿತರಣೆ’ ಮಾಡಲು ಪ್ರಯತ್ನಿಸಲಾಯಿತು. ಇದರಲ್ಲಿ ಭಾಗವಹಿಸಿದ್ದ ಪ್ರಖರ ಹಿಂದುತ್ವನಿಷ್ಠ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು ಪೊಲೀಸರು ಜೂನ್ 5 ರಂದು ವಶಕ್ಕೆ ಪಡೆದು ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಜೂನ್ 5 ರಂದು ಇಲ್ಲಿನ ದರ್ಬಾರ್ ಹೈಸ್ಕೂಲ್ ಮತ್ತು ಕಾಲೇಜು ಆವರಣದ ಬಳಿ ಕೇಸರಿ ಶಾಲುಗಳೊಂದಿಗೆ ಹಿಂದುತ್ವನಿಷ್ಠರು ಜಮಾಯಿಸಿದ್ದರು.
ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸುವ ಸಿದ್ಧತೆ ನಡೆಯುತ್ತಿದ್ದಾಗಲೇ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ತದನಂತರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಥಳಕ್ಕೆ ಆಗಮಿಸಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಪ್ರಾರಂಭಿಸುತ್ತಿದ್ದಂತೆಯೇ ಪೊಲೀಸರು ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು. ಇದರಿಂದ ಆಕ್ರೋಶಗೊಂಡ ಬೆಂಬಲಿಗರು ಪೊಲೀಸ್ ವಾಹನದ ಮುಂದೆ ಕುಳಿತು ಪ್ರತಿಭಟಿಸಿದರು. ಕ್ರಮೇಣ ಯತ್ನಾಳ್ ಮತ್ತು ಅವರ ಬೆಂಬಲಿಗರನ್ನು ಮುಕ್ತಗೊಳಿಸಲಾಯಿತು.
ಬಿಡುಗಡೆಯ ನಂತರ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ್ ಅವರು, ಹಿಜಾಬ್ ಗೆ ನೀಡಿರುವ ಅನುಮತಿಯನ್ನು ಸರಕಾರವು ತಕ್ಷಣವೇ ಮರುಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!