
ಸ್ಯಾಂಟೋ ಡೊಮಿಂಗೊ (ಡೊಮಿನಿಕನ್ ರಿಪಬ್ಲಿಕ್) – ಇಲ್ಲಿನ ‘ಲಾ ರೊಮಾನಾ’ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಜೆಟ್ ವಿಮಾನವೊಂದು ಪತನಗೊಂಡಿದೆ. ತುರ್ತು ಸಂದರ್ಭದಲ್ಲಿ ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಈ ವಿಮಾನವು ರನ್‌ವೇಗೆ ಅಪ್ಪಳಿಸಿ ಪುಟಿಯಿತು ಮತ್ತು ಕೆಲವೇ ಕ್ಷಣಗಳಲ್ಲಿ ಭೀಕರ ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಈ ಅಪಘಾತದಲ್ಲಿ ಪೈಲಟ್ ಮತ್ತು ಸಹ-ಪೈಲಟ್ ಇಬ್ಬರೂ ಸಾವನ್ನಪ್ಪಿದ್ದಾರೆ.
‘ಡೊಮಿನಿಕನ್ ಸಿವಿಲ್ ಏವಿಯೇಷನ್ ಇನ್‌ಸ್ಟಿಟ್ಯೂಟ್’ ನೀಡಿದ ಮಾಹಿತಿಯ ಪ್ರಕಾರ, ‘ಗಲ್ಫ್‌ಸ್ಟ್ರೀಮ್ ಜಿ-೨೦೦’ ಹೆಸರಿನ ಈ ಜೆಟ್ ವಿಮಾನವು ‘ಲಾ ರೊಮಾನಾ’ದಿಂದ ಅಮೆರಿಕದ ಆಸ್ಟಿನ್ ನಗರದ ಕಡೆಗೆ ಹೊಗುತ್ತಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ ತಾಂತ್ರಿಕ ದೋಷವೇ ಈ ಅಪಘಾತಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation