
ವಾಷಿಂಗ್ಟನ್ (ಅಮೆರಿಕ) – ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಇರಾನ್ ನಡುವೆ ಕೆಲವು ಕಾಲದವರೆಗೆ ಪರಸ್ಪರ ದಾಳಿ ನಡೆಸದಿರಲು ಒಮ್ಮತ ಮೂಡಿದೆ ಎಂದು ದಾವೆ ಮಾಡಿದ್ದಾರೆ. ನ್ಯೂಯಾರ್ಕ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ಮಧ್ಯಸ್ಥಿಕೆಯಿಂದಾಗಿ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪ್ರಗತಿಯಾಗಿದೆ ಎಂದು ತಿಳಿಸಿದ್ದಾರೆ.
ಟ್ರಂಪ್ ಅವರ ಪ್ರಕಾರ, ಇರಾನ್ ಜೊತೆಗಿನ ಪರಮಾಣು ಒಪ್ಪಂದದ ವಿಷಯದ ಮೇಲಿನ ಚರ್ಚೆಯು ಅಂತಿಮ ಹಂತಕ್ಕೆ ತಲುಪಿದ್ದು, ಮುಂದಿನ ೨-೩ ದಿನಗಳಲ್ಲಿ ಇದರ ಮೇಲೆ ಪ್ರಮುಖ ನಿರ್ಧಾರ ಹೊರಬರಬಹುದು. ಅಂತಿಮ ಒಪ್ಪಂದವಾಗುವವರೆಗೆ ‘ಸ್ಟ್ರೇಟ್ ಆಫ್ ಹಾರ್ಮುಜ್’ ಮೇಲಿನ ಅಮೆರಿಕದ ದಿಗ್ಬಂಧನವು ಮುಂದುವರಿಯಲಿದೆ. ಒಪ್ಪಂದವು ಪೂರ್ಣಗೊಂಡ ನಂತರ ಈ ಸಮುದ್ರ ಮಾರ್ಗವನ್ನು ತಕ್ಷಣವೇ ಮುಕ್ತಗೊಳಿಸಲಾಗುವುದು.
ಮತ್ತೊಂದೆಡೆ, ಟುನೀಶಿಯಾದಲ್ಲಿನ ಇರಾನ್ ರಾಯಭಾರ ಕಚೇರಿಯು ‘ಎಕ್ಸ್’ ನಲ್ಲಿ ಪ್ರಸಾರ ಮಾಡಿದ ಒಂದು ಚಿತ್ರದಿಂದ ಹೊಸ ವಿವಾದ ಸೃಷ್ಟಿಯಾಗಿದೆ. ಈ ಚಿತ್ರದಲ್ಲಿ ಟ್ರಂಪ್ ನಗುತ್ತಿರುವುದು ಕಂಡುಬರುತ್ತಿದ್ದು, ಇಸ್ರೇಲ್ ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಗೋಡೆಯ ಮೇಲೆ ಅಂಟಿಸಿರುವಂತೆ ತೋರಿಸಲಾಗಿದೆ. ಈ ಚಿತ್ರದ ಕೆಳಗೆ ‘ಒಂದು ವೇಳೆ ನೀವು ಇರಾನ್ ಜೊತೆ ವ್ಯವಹರಿಸಬೇಕೆಂದಿದ್ದರೆ…’ ಎಂದು ಬರೆಯಲಾಗಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation