
ಕೊಲಕಾತಾ (ಬಂಗಾಳ) – 8 ವರ್ಷಗಳ ಹಿಂದೆ ಉದ್ಯಮಿಯೊಬ್ಬರಿಂದ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಬಿಧಾನನಗರ ನಗರದ ಮಾಜಿ ಮಹಾಪೌರ ಸಬ್ಯಸಾಚಿ ದತ್ತಾ ಅವರನ್ನು ಪೊಲೀಸರು ರಾಯಗಾಚಿ ಪ್ರದೇಶದಿಂದ ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಉದ್ಯಮಿ ದೂರು ದಾಖಲಿಸಿದ್ದರು. ಸುಲಿಗೆಯ ಆರೋಪಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳು ಪೊಲೀಸರಿಗೆ ಸಿಕ್ಕಿವೆ ಎಂದು ವರದಿಯಾಗಿದೆ; ಆದರೆ ದತ್ತಾ ಈ ಆರೋಪಗಳನ್ನು ತಿರಸ್ಕರಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ತೃಣಮೂಲ ಕಾಂಗ್ರೆಸ್ಸಿನ ಹಿರಿಯ ನಾಯಕ ಹಾಗೂ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಚಿವ ಸಂಪುಟದಲ್ಲಿದ್ದ ಅಂದಿನ ಸಚಿವ ಸುಜಿತ್ ಬೋಸ್ ಅವರನ್ನು ಸಹ ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!