
ಕಾಬೂಲ್ (ಅಫ್ಘಾನಿಸ್ತಾನ್) – ಅಫ್ಘಾನಿಸ್ತಾನದ ಖೋಸ್ಟ್, ಕುನಾರ್ ಮತ್ತು ಪಕ್ತಿಕಾ ಎಂಬ 3 ಪ್ರಾಂತ್ಯಗಳ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯಲ್ಲಿ 13 ಅಫ್ಘಾನ್ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್‌ನ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಮಾಹಿತಿ ನೀಡಿದ್ದಾರೆ. ಮೃತರ ಪೈಕಿ 11 ಮಕ್ಕಳು ಸೇರಿದ್ದಾರೆ ಮತ್ತು ಉಳಿದ ಇಬ್ಬರಲ್ಲಿ ಒಬ್ಬ ವೃದ್ಧ ಪುರುಷ ಮತ್ತು ಒಬ್ಬ ಮಹಿಳೆ ಸೇರಿದ್ದಾರೆ ಎಂದು ತಾಲಿಬಾನ್ ತಿಳಿಸಿದೆ. ಈ ಕುರಿತು ಪಾಕಿಸ್ತಾನ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಪಾಕಿಸ್ತಾನದ ದಾಳಿಗೆ ಪ್ರತಿಯಾಗಿ ಅಫ್ಘಾನಿಸ್ತಾನ್ ಪಾಕಿಸ್ತಾನದ ಗಡಿಯೊಳಗೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಪಾಕಿಸ್ತಾನದಲ್ಲಿ ನಡೆಯುವ ಭಯೋತ್ಪಾದಕ ದಾಳಿಗಳಿಗೆ ಕಾರಣವಾದ ಸಂಘಟನೆಗಳಿಗೆ, ವಿಶೇಷವಾಗಿ ‘ತೆಹ್ರಿಕ್-ಎ-ತಾಲಿಬಾನ್ ಪಾಕಿಸ್ತಾನ್’ (ಟಿಟಿಪಿ) ಸಂಘಟನೆಗೆ ಅಫ್ಘಾನಿಸ್ತಾನದ ತಾಲಿಬಾನ್ ಸರಕಾರ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಪದೇ ಪದೇ ಆರೋಪಿಸಿದೆ. ಮತ್ತೊಂದೆಡೆ, ತಾಲಿಬಾನ್ ಪಾಕಿಸ್ತಾನದ ಈ ಆರೋಪವನ್ನು ಸತತವಾಗಿ ತಿರಸ್ಕರಿಸಿದೆ. ಇದೇ ವಿಷಯ ಉಭಯ ದೇಶಗಳ ನಡುವಿನ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಈ ಸಂಘರ್ಷದಲ್ಲಿ ಇದುವರೆಗೆ ಎರಡೂ ದೇಶಗಳ ನೂರಾರು ನಾಗರಿಕರು ಮತ್ತು ಸೈನಿಕರು ಸಾವನ್ನಪ್ಪಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim