
ನವ ದೆಹಲಿ – ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ, ಎಂದು ಭಾರತವು ಆ ಪ್ರಾಂತ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಪ್ರತಿಕ್ರಿಯಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪಾಕಿಸ್ತಾನದ ಭದ್ರತಾ ಪಡೆಗಳು ನಡೆಸಿರುವ ಕಠಿಣ ಕ್ರಮಗಳ ಕುರಿತು ಪಾಕಿಸ್ತಾನವು ಸುಳ್ಳು ಸುದ್ದಿ ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಭಾರತವು ಆರೋಪಿಸಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಇದುವರೆಗೆ 120 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಮಾತನಾಡಿ,
1. ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನವು ಸುಳ್ಳು ಸುದ್ದಿ ಮತ್ತು ವಿಡಿಯೋಗಳನ್ನು ಹರಡುತ್ತಿರುವುದು ಕಂಡುಬರುತ್ತಿದೆ. ಇದು ತನ್ನ ವೈಫಲ್ಯವನ್ನು ಮುಚ್ಚಿಡಲು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಮಾಡುತ್ತಿರುವ ಪ್ರಯತ್ನವಾಗಿದೆ.
2. ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಪೊಲೀಸರು ಅಮಾನವೀಯವಾಗಿ ನಡೆದುಕೊಳ್ಳುತ್ತಿರುವ ಸುದ್ದಿಗಳು ಬರುತ್ತಿವೆ. ಅಲ್ಲಿ ನಡೆದ ಹಿಂಸಾಚಾರದಲ್ಲಿ ಹಲವರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ.
3. ಅಂತರರಾಷ್ಟ್ರೀಯ ಸಮುದಾಯವು ಪಾಕಿಸ್ತಾನದ ತಪ್ಪು ಕೃತ್ಯಗಳಿಗೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗಾಗಿ ಅದನ್ನು ಹೊಣೆಗಾರರನ್ನಾಗಿ ಮಾಡುತ್ತದೆ ಎಂದು ನಾವು ಆಶಿಸುತ್ತೇವೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಮುಂದುವರಿದ ಹಿಂಸಾಚಾರ !
ಸ್ಥಳೀಯ ಆಡಳಿತ ಮತ್ತು ಪಾಕಿಸ್ತಾನ ಸರಕಾರದ ಅನ್ಯಾಯದ ನೀತಿಗಳ ವಿರುದ್ಧ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ನಾಗರಿಕರು ಬೀದಿಗಿಳಿದಿದ್ದು, ಅಲ್ಲಿ ದೊಡ್ಡ ಪ್ರಮಾಣದಲ್ಲಿ; ಆದರೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಕಿಸ್ತಾನದ ಭದ್ರತಾ ಪಡೆಗಳು ಈ ಪ್ರತಿಭಟನಾಕಾರರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಲ್ಲದೆ, ಅವರ ಮೇಲೆ ಗುಂಡಿನ ದಾಳಿ ಮಾಡಿದೆ. ಇದರೊಂದಿಗೆ ಪ್ರತಿಭಟನಾಕಾರರನ್ನು ಚದುರಿಸಲು ಅಶ್ರುವಾಯು ಸೆಲ್ ಗಳನ್ನು ಸಿಡಿಸಿ, ನಂತರ ಲಾಠಿ ಚಾರ್ಜ್ ಕೂಡ ಮಾಡಿದರು.. ಇದಕ್ಕೆ ಪ್ರತಿಯಾಗಿ ಪ್ರತಿಭಟನಾಕಾರರು ಸೈನ್ಯದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಇದರ ನಂತರ ಆಕ್ರೋಶಗೊಂಡ ಪ್ರತಿಭಟನಾಕಾರರು ‘ಇದು ಪಾಕಿಸ್ತಾನದ ದಬ್ಬಾಳಿಕೆಯಾಗಿದೆ’ ಎಂದು ಆರೋಪಿಸಿದ್ದಾರೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ