
ವಾಷಿಂಗ್ಟನ್ (ಅಮೆರಿಕ) – ಇರಾನ್ ಬಳಿ ಪರಮಾಣು ಶಸ್ತ್ರಾಸ್ತ್ರಗಳು ಇದ್ದಿದ್ದರೆ, ಇಸ್ರೇಲ್‌ನ ಅಸ್ತಿತ್ವವೇ ಇರುತ್ತಿರಲಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಲ್ಲಿ ಹೇಳಿಕೆ ನೀಡಿದ್ದಾರೆ. ಅವರು ತಮ್ಮ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಟ್ರಂಪ್ ಅವರು,
೧. ಪರಮಾಣು ಶಸ್ತ್ರಾಸ್ತ್ರ ಸಜ್ಜಿತ ಇರಾನ್ ಇಸ್ರೇಲ್‌ಗೆ, ಹಾಗೆಯೇ ಇಡೀ ಪ್ರದೇಶಕ್ಕೆ ದೊಡ್ಡ ಅಪಾಯವಾಗಲಿದೆ. ಅಮೆರಿಕ ಈ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದ್ದು, ಅಗತ್ಯವಿದ್ದರೆ ಸೈನಿಕ ಕಾರ್ಯಾಚರಣೆಯನ್ನು ಮುಂದುವರಿಸಲಾಗುವುದು.
೨. ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಮಾತುಕತೆಗಳಲ್ಲಿ ಪ್ರಗತಿಯಾಗುತ್ತಿದ್ದರೂ, ಇರಾನ್‌ನಿಂದ ವಂಚನೆ ಮಾಡಲಾಗುತ್ತಿದೆ.
೩. ಅಮೆರಿಕವು ಈ ಹಿಂದೆಯೂ ಇರಾನ್ ಮೇಲೆ ಆಕ್ರಮಣ ಮಾಡಿದ್ದು, ಭವಿಷ್ಯದಲ್ಲೂ ಸೈನಿಕ ಕಾರ್ಯಾಚರಣೆ ಮುಂದುವರಿಯಬಹುದು. ಇರಾನ್ ಅಮೆರಿಕದ ಸೈನಿಕ ನೆಲೆಗಳ ಮೇಲೆ ದಾಳಿ ಮಾಡಿದ ಮತ್ತು ಅಪಾಚೆ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದ ಹಿನ್ನೆಲೆಯಲ್ಲಿ ಪ್ರತೀಕಾರದ ಕಾರ್ಯಾಚರಣೆ ನಡೆಸುವ ಹಕ್ಕು ಅಮೆರಿಕಕ್ಕೆ ಇದೆ ಎಂದು ಹೇಳಿದರು.
ಟ್ರಂಪ್ ಅವರಿಂದ ಅಮೆರಿಕದ ಹಿಂದಿನ ಸರಕಾರಗಳ ಟೀಕೆ !
ಈ ಸಂದರ್ಭದಲ್ಲಿ ಟ್ರಂಪ್ ಹಿಂದಿನ ಅಮೆರಿಕನ್ ಸರಕಾರಗಳನ್ನೂ ಟೀಕಿಸಿದರು. ಅಮೆರಿಕದ ಹಿಂದಿನ ಸರಕಾರಗಳು ಅಮೆರಿಕದ ಹಿತಾಸಕ್ತಿಯ ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದವು ಎಂದು ಅವರು ಹೇಳಿದರು.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’