ಪ್ರಪಂಚ ಅಸ್ಥಿರವಾಗಿದ್ದರೂ; ಭಾರತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ! – ಪ್ರಧಾನಮಂತ್ರಿ

ನೀತಿ ಆಯೋಗದ ೧೧ನೇ ಸಭೆ;

​ನವ ದೆಹಲಿ – ಜಾಗತಿಕ ಅನಿಶ್ಚಿತತೆ ಮತ್ತು ಅಸ್ಥಿರತೆಯ ಕಾಲದಲ್ಲೂ ಭಾರತವು ಆತ್ಮವಿಶ್ವಾಸದಿಂದ ಹಾಗೂ ದೃಢ ಸಂಕಲ್ಪದೊಂದಿಗೆ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ, ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನೀತಿ ಆಯೋಗದ ಆಡಳಿತ ಮಂಡಳಿಯ ೧೧ನೇ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

​ಪ್ರಧಾನಿ ಮೋದಿ ಅವರು ಮಾತನಾಡುತ್ತಾ, ‘ವಿಕಸಿತ ಭಾರತ’ದ ಕನಸನ್ನು ನನಸಾಗಿಸಲು ಕೇಂದ್ರ ಮತ್ತು ರಾಜ್ಯಗಳು ಜೊತೆಯಾಗಿ ಕೆಲಸ ಮಾಡುವುದು ಅಗತ್ಯವಾಗಿದೆ. ಭಾರತವು ಅನೇಕ ದೇಶಗಳ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿರುವುದರಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಅವಕಾಶಗಳು ದೊರೆಯುತ್ತಿವೆ ಎಂದು ಹೇಳಿದರು. ಇದೇ ವೇಳೆ ಪ್ರಧಾನಮಂತ್ರಿಯವರು, ಯುವಕರು ಮತ್ತು ಮಹಿಳೆಯರ ಸಬಲೀಕರಣವೇ ವಿಕಸಿತ ಭಾರತದ ಪ್ರಮುಖ ಆಧಾರಸ್ತಂಭಗಳಾಗಿವೆ ಎಂದು ತಿಳಿಸಿದರಲ್ಲದೆ, ಗುಣಮಟ್ಟದ ಶಿಕ್ಷಣ, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಯ ಅಗತ್ಯತೆಯ ಮೇಲೂ ಒತ್ತು ನೀಡಿದರು.