ಕೇಂದ್ರ ಗೃಹಮಂತ್ರಿ ಅಮಿತ್ ಶಾ ಅವರ ಹೇಳಿಕೆ

ನವದೆಹಲಿ – ಮುಂದಿನ ವರ್ಷದ ವೇಳೆಗೆ ಒಂದು ಅಥವಾ ಎರಡು ರಾಜ್ಯಗಳನ್ನು ಹೊರತುಪಡಿಸಿ ಇಡೀ ಈಶಾನ್ಯ ಭಾರತದಿಂದ ‘ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆ’ಯನ್ನು (ಅಫ್ಸ್ಫಾ) ಹಿಂಪಡೆಯಬಹುದು ಎಂದು ಕೇಂದ್ರ ಗೃಹಮಂತ್ರಿ ಅಮಿತ್ ಶಾ ಇಲ್ಲಿ ಹೇಳಿಕೆ ನೀಡಿದ್ದಾರೆ.
ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿ ತೈಲ ಮತ್ತು ಖನಿಜಗಳ ಉತ್ಖನನಕ್ಕಾಗಿ ಕೇಂದ್ರ ಸರಕಾರ ಹಾಗೂ ಅಸ್ಸಾಂ ಮತ್ತು ನಾಗಾಲ್ಯಾಂಡ್ ರಾಜ್ಯ ಸರಕಾರಗಳ ನಡುವೆ ತ್ರಿಪಕ್ಷೀಯ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಆ ಸಂದರ್ಭದಲ್ಲಿ ಗೃಹಮಂತ್ರಿಗಳು ಮಾತನಾಡುತ್ತಿದ್ದರು.
ಈಶಾನ್ಯ ಭಾರತದಲ್ಲಿ ಶಾಶ್ವತ ಶಾಂತಿ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಸರಕಾರವು ನಿರಂತರವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗೃಹಮಂತ್ರಿಗಳು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2019 ರಿಂದ ಹಲವಾರು ಶಾಂತಿ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಇದರಿಂದಾಗಿ ಹಿಂಸಾತ್ಮಕ ಘಟನೆಗಳಲ್ಲಿ ಶೇಕಡಾ 80 ರಷ್ಟು ಇಳಿಕೆಯಾಗಿದೆ ಮತ್ತು ‘ಸಶಸ್ತ್ರ ಪಡೆಗಳ ಕಾಯ್ದೆ’ಯ ವ್ಯಾಪ್ತಿಗೆ ಬರುವ ಒಟ್ಟು ವಿಸ್ತೀರ್ಣದಲ್ಲೂ ಶೇಕಡಾ 80 ರಷ್ಟು ಇಳಿಕೆಯಾಗಿದೆ. ಇಂದು ಇಡೀ ಈಶಾನ್ಯ ಭಾರತವು ‘ರಾಷ್ಟ್ರ ಪ್ರಥಮ’ ಎಂಬ ಭಾವನೆಯೊಂದಿಗೆ ಮುನ್ನಡೆಯುತ್ತಿದೆ. ಈ ಒಪ್ಪಂದವು ಈ ಪ್ರದೇಶದ ಪ್ರಗತಿಗೆ ದಾರಿ ಮಾಡಿಕೊಡಲಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!