
ನವದೆಹಲಿ – ನ್ಯಾಯಾಲಯದ ತೀರ್ಪುಗಳು ಮತ್ತು ಸಂಸ್ಥೆಗಳ ಕುರಿತು ವಸ್ತುನಿಷ್ಠ ವಿಮರ್ಶೆ ಮಾಡಲು ಪ್ರತಿಯೊಬ್ಬರಿಗೂ ಹಕ್ಕಿದೆ. ಆದಾಗ್ಯೂ, ನ್ಯಾಯಾಧೀಶರ ಮಾನಹಾನಿ ಮಾಡಲು ಅಥವಾ ನ್ಯಾಯಾಂಗದ ಸ್ವಾಯತ್ತತೆಯಲ್ಲಿ ಹಸ್ತಕ್ಷೇಪ ಮಾಡಲು ಸಾಮಾಜಿಕ ಮಾಧ್ಯಮಗಳನ್ನು ಬಳಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಸ್ಪಷ್ಟಪಡಿಸಿದೆ. ನ್ಯಾಯಾಧೀಶರ ಮೇಲೆ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡುವುದು ನ್ಯಾಯಾಂಗ ನಿಂದನೆಯಾಗಬಹುದು ಎಂದೂ ನ್ಯಾಯಾಲಯವು ಸ್ಪಷ್ಟಪಡಿಸಿದೆ.
1. ದೆಹಲಿಯ ಸೈದುಲಾಜಾಬ್‌ನಲ್ಲಿ ಸಂಭವಿಸಿದ ಕಟ್ಟಡ ಕುಸಿತದ ದುರಂತದ ನಂತರ, ಸಾಮಾಜಿಕ ಮಾಧ್ಯಮ ಬಳಕೆದಾರರಾದ ಡಾ. ಕಪಿಲ್ ಕಕರ್ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ವಿಡಿಯೋಗಳನ್ನು ಪ್ರಸಾರ ಮಾಡಿದ್ದರು.
2. ಇದರಲ್ಲಿ ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರ ವಿರುದ್ಧ ಗಂಭೀರ ಮತ್ತು ಆಕ್ಷೇಪಾರ್ಹ ಆರೋಪಗಳನ್ನು ಮಾಡಲಾಗಿತ್ತು. ಇದರ ವಿರುದ್ಧ ‘ದೆಹಲಿ ಹೈಕೋರ್ಟ್ ಬಾರ್ ಅಸೋಸೋಷನ್’ ಡಾ. ಕಕರ್ ಅವರ ವಿರುದ್ಧ ಕ್ರಿಮಿನಲ್ ಅರ್ಜಿ ದಾಖಲಿಸಿತ್ತು.
3. ಈ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಮತ್ತು ನ್ಯಾಯಮೂರ್ತಿ ಮಧು ಜೈನ್ ಅವರ ವಿಭಾಗೀಯ ಪೀಠವು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಡಾ. ಕಕರ್ ಅವರಿಗೆ ನೋಟಿಸ್ ಜಾರಿಗೊಳಿಸಿತು.
4. ಸಂಬಂಧಿತ ಆರೋಪಗಳು ನ್ಯಾಯದಾನ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವಂತಿವೆ ಎಂದು ನ್ಯಾಯಾಲಯವು ಉಲ್ಲೇಖಿಸಿದೆ. ಇದರೊಂದಿಗೆ ನ್ಯಾಯಾಲಯವು ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಯೂಟ್ಯೂಬ್ ಮತ್ತು ಎಕ್ಸ್ ಸಂಸ್ಥೆಗಳಿಗೆ ಸಂಬಂಧಿತ ವಿಡಿಯೋಗಳನ್ನು ತಕ್ಷಣವೇ ತೆಗೆದುಹಾಕುವಂತೆ ಆದೇಶಿಸಿದೆ.
5. ಇಂತಹ ವಿಡಿಯೋಗಳು ಪ್ರಸಾರವಾದ ಸಾಮಾಜಿಕ ಮಾಧ್ಯಮ ಖಾತೆಗಳ (‘ಅಕೌಂಟ್ಸ್’ಗಳ) ಮಾಹಿತಿ ಮತ್ತು ಇತರ ತಾಂತ್ರಿಕ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆಯೂ ನ್ಯಾಯಾಲಯವು ಆದೇಶಿಸಿದೆ.
6. ಸಾಮಾಜಿಕ ಮಾಧ್ಯಮಗಳನ್ನು ನಡೆಸುವ ಸಂಸ್ಥೆಗಳು ಇಂತಹ ವಿಷಯಗಳ ಬಗ್ಗೆ ಮೌನವಾಗಿರಲು ಸಾಧ್ಯವಿಲ್ಲ. ಇಂತಹ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶಕ್ಕಾಗಿ ಕಾಯದೆ ಸಂಬಂಧಿತ ಸಂಸ್ಥೆಗಳೇ ಸ್ವತಃ ಕ್ರಮ ಕೈಗೊಳ್ಳುವುದು ಅಪೇಕ್ಷಿತವಾಗಿದೆ. ನ್ಯಾಯಾಂಗ ವ್ಯವಸ್ಥೆಯ ಪ್ರತಿಷ್ಠೆಗೆ ಧಕ್ಕೆ ತರುವ ಅಥವಾ ಅದರ ಸ್ವಾಯತ್ತತೆಯನ್ನು ಅಲ್ಲಾಡಿಸುವ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ನ್ಯಾಯಾಲಯವು ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ