ವಿಡಿಯೋ ತೆಗೆಯುವಂತೆ ಉಚ್ಚ ನ್ಯಾಯಾಲಯದ ಆದೇಶ!

ಮುಂಬಯಿ – ನಟ ಸಲ್ಮಾನ್ ಖಾನ್ ಅವರು ಪನ್ವೇಲ್‌ನಲ್ಲಿರುವ ತಮ್ಮ ‘ಫಾರ್ಮ್ ಹೌಸ್’ (ತೋಟದ ಮನೆ) ನಿರ್ಮಾಣಕ್ಕಾಗಿ ಪರಿಸರ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಅವರ ನೆರೆಹೊರೆಯವರಾದ ಕೇತನ್ ಕಕ್ಕರ್ ಆರೋಪಿಸಿದ್ದಾರೆ. ತಮ್ಮ ಮನೆಗೆ ಹೋಗುವ ರಸ್ತೆಯನ್ನೂ ಖಾನ್ ಮುಚ್ಚಿದ್ದಾರೆ ಎಂದು ಕಕ್ಕರ್ ಹೇಳಿದ್ದಾರೆ. ಈ ಸಂಬಂಧ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದರೂ, ಅವರ ದೂರನ್ನು ದಾಖಲಿಸಿಕೊಂಡಿಲ್ಲ. (ಸಲ್ಮಾನ್ ಖಾನ್ ಪ್ರಭಾವಿ ವ್ಯಕ್ತಿಯಾಗಿರುವುದರಿಂದ ಅಧಿಕಾರಿಗಳು ಅವರ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯ ಮಾಡುತ್ತಿಲ್ಲ ಎಂದೇ ಹೇಳಬೇಕಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆಯೇ? – ಸಂಪಾದಕರು)
Bombay High Court orders removal of video accusing Salman Khan of environmental violations.
Why do officials turn a blind eye to high-profile figures?
Will the authorities face action?
Also, a deafening silence from environmentalists right now.
#SalmanKhan #Environment… pic.twitter.com/lxRbOZYM1F
— Sanatan Prabhat (@SanatanPrabhat) June 13, 2026
ಕಕ್ಕರ್ ಅವರು ಬೇಸತ್ತು ಸ್ವತಃ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋದಿಂದ ಮಾನಹಾನಿಯಾಗುತ್ತಿದೆ ಎಂದು ಆರೋಪಿಸಿ ಖಾನ್ ಮೊದಲು ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಸಾಮಾಜಿಕ ಜಾಲತಾಣಗಳಿಂದ ವಿಡಿಯೋ ತೆಗೆದು ಹಾಕುವಂತೆ ಕಕ್ಕರ್ ಅವರಿಗೆ ಆದೇಶಿಸಲು ನ್ಯಾಯಾಲಯ ನಿರಾಕರಿಸಿದಾಗ, ಖಾನ್ ಉಚ್ಚ ನ್ಯಾಯಾಲಯದ ಮೊರೆ ಹೋದರು.
‘ಕಕ್ಕರ್ ಅವರ ಪೋಸ್ಟ್‌ಗಳು ಮಾನಹಾನಿಕರ ಮತ್ತು ಜಾತಿ ದ್ವೇಷವನ್ನು ಉಂಟುಮಾಡುವಂತದ್ದಾಗಿದ್ದು, ಅನೇಕರು ಅದನ್ನು ವೀಕ್ಷಿಸಿದ್ದಾರೆ ಮತ್ತು ಅದಕ್ಕೆ ಪ್ರತಿಕ್ರಿಯಿಸಿದ್ದಾರೆ’ ಎಂದು ಖಾನ್ ಉಚ್ಚ ನ್ಯಾಯಾಲಯದಲ್ಲಿ ವಾದಿಸಿದ್ದರು. ಇದಕ್ಕೆ ನ್ಯಾಯಾಲಯವು, ಸಾಮಾಜಿಕ ಜಾಲತಾಣಗಳನ್ನು ಸುಲಭವಾಗಿ ಬಳಸಬಹುದು ಎಂದಾಕ್ಷಣ ಯಾರದ್ದೋ ವಿರುದ್ಧ ಮಾನಹಾನಿ ವಿಡಿಯೋ ಮಾಡಬಹುದು ಎಂದಲ್ಲ ಎಂದು ಹೇಳಿತು. ಈ ನಿಟ್ಟಿನಲ್ಲಿ ನ್ಯಾಯಾಲಯವು ವಿಡಿಯೋ ತೆಗೆದುಹಾಕುವ ಬಗ್ಗೆ ಯೋಚಿಸುವಂತೆ ಕಕ್ಕರ್ ಅವರಿಗೆ ತಿಳಿಸಿತು. ಅಲ್ಲದೆ, ಖಾನ್ ವಿರುದ್ಧ ಕಾನೂನುಬದ್ಧ ಮಾರ್ಗಗಳ ಮೂಲಕ ಕ್ರಮ ಕೈಗೊಳ್ಳಲು ಏಕೆ ಪ್ರಯತ್ನಿಸಲಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಕಕ್ಕರ್ ಅವರು, ‘ಅಧಿಕಾರಿಗಳನ್ನು ಸಂಪರ್ಕಿಸಿದರೂ ಅವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದೇನೆ’ ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”