
ಭಾಗ್ಯನಗರ (ತೆಲಂಗಾಣ) – ಪಾಕಿಸ್ತಾನವು ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕರ ಬೆಂಬಲಿಗರಿಗೆ ಸಿಂಧೂ ನದಿಯ ನೀರು ಸಿಗುವುದಿಲ್ಲವೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಭಾಗ್ಯನಗರದಲ್ಲಿ ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.
ಸಿಂಗ್ ಅವರು ಮುಂದುವರಿದು, ‘‘ಶಾಂತಿ ಮತ್ತು ಸೌಹಾರ್ದತೆಯ ಭಾಷೆಯನ್ನು ಅರ್ಥಮಾಡಿಕೊಳ್ಳದವರಿಗೆ ಹೇಗೆ ಪ್ರತ್ಯುತ್ತರ ನೀಡಬೇಕೆಂದು ಭಾರತಕ್ಕೆ ಚೆನ್ನಾಗಿ ತಿಳಿದಿದೆ ಎಂಬುದನ್ನು ‘ಆಪರೇಷನ್ ಸಿಂದೂರ್’ ಮೂಲಕ ಪ್ರಪಂಚಕ್ಕೆ ಭಾರತ ತೋರಿಸಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ಸಿಂಧೂ ನದಿ ನೀರು ಒಪ್ಪಂದ’ವನ್ನು ರದ್ದುಗೊಳಿಸುವ ಮೂಲಕ ‘ಮಾನವೀಯತೆ ಮತ್ತು ಕರುಣೆ ಕಳೆದುಕೊಂಡವರು ಭಾರತದಿಂದ ನೀರನ್ನು ನಿರೀಕ್ಷಿಸಬಾರದೆಂದು ನಾವು ತೋರಿಸಿದ್ದೇವೆ. ಯಾರು ಭಯೋತ್ಪಾದನೆಗೆ ಆಶ್ರಯ ನೀಡುತ್ತಾರೋ ಮತ್ತು ಯಾರು ಮಾನವೀಯತೆಯ ಶತ್ರುಗಳಾಗಿದ್ದಾರೋ, ಅವರಿಗೆ ಸಿಂಧೂ ನದಿ ನೀರು ತಲುಪಲು ನಾವು ಬಿಡುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ನೀಡಿದೆ’’ ಎಂದರು.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ‘ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ’ ಎಂದು ಹೇಳಿಕೆ ನೀಡಿದ್ದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister