ನಾಸಿಕ್: ಕುಂಭಮೇಳ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ನಾಸಿಕ್ – ಇಲ್ಲಿ ಮುಂದಿನ ವರ್ಷ ಸಿಂಹಸ್ಥ ಕುಂಭಮೇಳ ನಡೆಯಲಿದೆ. ಈ ಅವಧಿಯಲ್ಲಿ ಬರುವ ಭಕ್ತಾದಿಗಳಿಗಾಗಿ ವಿವಿಧೆಡೆ ನದಿ ತೀರದಲ್ಲಿ ಸ್ನಾನ ಘಟ್ಟ ನಿರ್ಮಿಸಲಾಗುತ್ತಿದೆ. ಈ ಸ್ನಾನ ಘಟ್ಟಗಳ ಕಾಮಗಾರಿಯನ್ನು ಜನವರಿ 2027 ರೊಳಗೆ ಪೂರ್ಣಗೊಳಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕನಾಥ ಡವಳೆ ಆದೇಶಿಸಿದ್ದಾರೆ. ಡವಳೆ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕೇಂದ್ರ ಸಭಾಂಗಣದಲ್ಲಿ ಕುಂಭಮೇಳದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನಾ ಸಭೆ ನಡೆಯಿತು. ಇಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರಕಾರವು ಭಾರಿ ಧನಸಹಾಯ ಒದಗಿಸಿದೆ.
ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ರಸ್ತೆ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಳ್ಳುವಂತೆ ಯೋಜನೆ ರೂಪಿಸಬೇಕು. ಸಾಧು ಗ್ರಾಮ, ನಾಸಿಕ್ ಪರಿಕ್ರಮ ಮಾರ್ಗ, ದ್ವಾರಕಾ ಸರ್ಕಲ್, ರಾಮಕಾಲ ಪಥ, ತ್ರ್ಯಂಬಕೇಶ್ವರದ ದರ್ಶನ ಪಥ, ಓಝರ್ ವಿಮಾನ ನಿಲ್ದಾಣದ ವಿಸ್ತರಣಾ ಕಾಮಗಾರಿಗಳನ್ನು ಚುರುಕುಗೊಳಿಸಬೇಕು. ಈ ಎಲ್ಲಾ ಕಾಮಗಾರಿಗಳ ಪರಿಶೀಲನೆಯನ್ನು ಶೀಘ್ರದಲ್ಲೇ ಮತ್ತೊಮ್ಮೆ ನಡೆಸಲಾಗುವುದೆಂದು ಡವಳೆ ಈ ಸಂದರ್ಭದಲ್ಲಿ ತಿಳಿಸಿದರು.
ಈ ವೇಳೆ ಜಿಲ್ಲಾಧಿಕಾರಿ ಪ್ರಸಾದ ಅವರು ನಾಸಿಕ್ ಪ್ರದಕ್ಷಿಣೆ ಮಾರ್ಗಕ್ಕಾಗಿ ನಡೆಯುತ್ತಿರುವ ಭೂಸ್ವಾಧೀನದ ಕುರಿತು ಮಾಹಿತಿ ನೀಡಿದರು. ವಿಶೇಷ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಐನಪುರೆ ಮತ್ತು ಪೊಲೀಸ್ ಆಯುಕ್ತ ಕರ್ಣಿಕ್ ಅವರು ವಿವಿಧ ಸಲಹೆಗಳನ್ನು ನೀಡಿದರು. ನಾಸಿಕ್ ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಖತ್ರಿ ಹಾಗೂ ವಿವಿಧ ಇಲಾಖೆಗಳ ಇಂಜಿನಿಯರ್ ಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳ ಸದ್ಯದ ಸ್ಥಿತಿಗತಿಯನ್ನು ವಿವರಿಸಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”