
ನವದೆಹಲಿ – ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಅಂದರೆ ಡಿ.ಆರ್.ಡಿ.ಓ. (DRDO) ಬಹುಸ್ತರದ ಬ್ಯಾಲಿಸ್ಟಿಕ್ ಕ್ಷಿಪಣಿ ರಕ್ಷಣಾ ವ್ಯವಸ್ಥೆಯ ಸತತ ೩ ಯಶಸ್ವಿ ಪರೀಕ್ಷೆಗಳನ್ನು ಪೂರ್ಣಗೊಳಿಸಿದೆ. ಜೂನ್ ೧೦ ಮತ್ತು ೧೧ ರಂದು ನಡೆದ ಈ ಪರೀಕ್ಷೆಗಳಲ್ಲಿ ಇಂಟರ್ಸೆಪ್ಟರ್ ಕ್ಷಿಪಣಿಗಳು ಗುರಿಯನ್ನು ನಿಖರವಾಗಿ ಭೇದಿಸಿವೆ. ಇದರಿಂದಾಗಿ ಭಾರತವು ಈಗ ಶತ್ರುಗಳ ಕ್ಷಿಪಣಿಗಳನ್ನು ಗಾಳಿಯಲ್ಲೇ ನಾಶಪಡಿಸುವ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದರೊಂದಿಗೆ ಭಾರತವು ಇಂತಹ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಹೊಂದಿರುವ ಆಯ್ದ ದೇಶಗಳ ಗುಂಪಿಗೆ ಸೇರ್ಪಡೆಯಾಗಿದೆ.
ಇದೇ ಅವಧಿಯಲ್ಲಿ ನೌಕಾದಳಕ್ಕೆ ಅಭಿವೃದ್ಧಿಪಡಿಸಲಾದ ಮಧ್ಯಮ ವ್ಯಾಪ್ತಿಯ ಹಡಗು ವಿರೋಧಿ (ಆಂಟಿ-ಶಿಪ್) ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯೂ ಯಶಸ್ವಿಯಾಗಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಈ ಸಾಧನೆಗಾಗಿ ಡಿ.ಆರ್.ಡಿ.ಓ. ಅನ್ನು ಅಭಿನಂದಿಸಿದ್ದು, ಇದು ದೇಶದ ಭದ್ರತಾ ಸನ್ನದ್ಧತೆ ಮತ್ತು ರಕ್ಷಣಾ ಕ್ಷೇತ್ರದಲ್ಲಿನ ಆತ್ಮನಿರ್ಭರತೆಯನ್ನು ಮತ್ತಷ್ಟು ಬಲಪಡಿಸಲಿದೆ ಎಂದು ಹೇಳಿದ್ದಾರೆ.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!