
ಗೌಹತ್ತಿ (ಆಸ್ಸಾಂ) – ಜೋಹರಾತ್ ವಾಯುಪಡೆಯ ನೆಲೆಯಲ್ಲಿ ‘ಎಎನ್-32’ ವಿಮಾನವು ಇಳಿಯುತ್ತಿದ್ದಾಗ ಅದು ಪತನಗೊಂಡು 5 ಸೈನಿಕರು ವೀರಮರಣ ಹೊಂದಿದ್ದಾರೆ ಎಂದು ಭಾರತೀಯ ವಾಯುಪಡೆಯು ಮಾಹಿತಿ ನೀಡಿದೆ. ಇದರಲ್ಲಿ ಸ್ಕ್ವಾಡ್ರನ್ ಲೀಡರ್ ಪ್ರಶಾಂತ ಸಿಂಗ, ಫ್ಲೈಟ್ ಲೆಫ್ಟಿನೆಂಟ್ ಶುಭಮ ಕುಮಾರ, ಸಾರ್ಜಂಟ್ ಜಿತೇಂದ್ರ ಶರ್ಮಾ, ಅಗ್ನಿವೀರ ವಾಯು ಖೇಮಾರಾಮ ಕುಮಾವತ ಮತ್ತು ಅಗ್ನಿವೀರ ವಾಯು ದಾನಿಶ ಆಲಂ ಸೇರಿದ್ದಾರೆ. ಅಪಘಾತಕ್ಕೆ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖಾ ಸಮಿತಿಗೆ ಆದೇಶಿಸಲಾಗಿದೆ.

ಇದೇ ರೀತಿಯ ಘಟನೆಯೊಂದು ಮಾರ್ಚ್ 5ರಂದು ನಡೆದಿತ್ತು. ಆಸ್ಸಾಂನ ಕಾರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಸುಖೋಯ್ ‘ಸೂ-30 ಎಮ್.ಕೆ.ಐ.’ ಯುದ್ಧ ವಿಮಾನವು ಪತನಗೊಂಡು ಅದರಲ್ಲಿದ್ದ ಇಬ್ಬರೂ ಪೈಲಟ್ ಗಳು ಮೃತಪಟ್ಟಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ