ಪುರಾತತ್ವ ಇಲಾಖೆಯ ನಿರ್ಲಕ್ಷ್ಯ!

ಫಿರೋಜಾಬಾದ್ (ಉತ್ತರ ಪ್ರದೇಶ) – ಜಿಲ್ಲೆಯ ಕೋಟ್ಲಾದಲ್ಲಿರುವ ವನಖಂಡೇಶ್ವರ ಮಹಾದೇವ ದೇವಸ್ಥಾನದಲ್ಲಿ ಕಳೆದ ವರ್ಷ ಉತ್ಖನನದ ವೇಳೆ ೪೦ ಕಿಲೋಗ್ರಾಂಗಳಿಗಿಂತ ಹೆಚ್ಚು ತೂಕದ ಕುಶಾಣ ಕಾಲದ ನಾಣ್ಯಗಳು ಪತ್ತೆಯಾಗಿದ್ದವು. ಕನಿಷ್ಠ ೨ ಸಾವಿರ ವರ್ಷಗಳಷ್ಟು ಹಳೆಯದು ಎಂದು ಅಂದಾಜಿಸಲಾದ ಈ ನಾಣ್ಯಗಳನ್ನು ತಾಮ್ರದ ಲೋಹದಿಂದ ಮಾಡಲಾಗಿತ್ತು. ಪುರಾತತ್ವ ಇಲಾಖೆಯು ಆ ನಾಣ್ಯಗಳನ್ನು ದೇವಸ್ಥಾನದ ಕೋಣೆಯೊಂದರಲ್ಲಿ ಇರಿಸಿತ್ತು. ಈ ನಾಣ್ಯಗಳನ್ನು ನಂತರ ವಸ್ತುಸಂಗ್ರಹಾಲಯಕ್ಕೆ ಕಳುಹಿಸಲಾಗುವುದು ಎಂದು ಇಲಾಖೆಯ ತಂಡವು ತಿಳಿಸಿತ್ತು.
ಪುರಾತತ್ವ ದೃಷ್ಟಿಯಿಂದ ಅತ್ಯಂತ ಮಹತ್ವದ ಈ ನಾಣ್ಯಗಳು ಈಗ ನಾಪತ್ತೆಯಾಗಿವೆ. ಉತ್ತರ ಪ್ರದೇಶ ರಾಜ್ಯ ಪುರಾತತ್ವ ಇಲಾಖೆಯ ನಿರ್ಲಕ್ಷ್ಯದಿಂದಲೇ ಇದು ಸಂಭವಿಸಿದೆ ಎಂದು ಆರೋಪಿಸಲಾಗಿದೆ. ನಾಣ್ಯಗಳನ್ನು ಪರಿಶೀಲಿಸಲು ತಂಡವೊಂದು ಬಂದಾಗ, ಅವು ದೇವಸ್ಥಾನದ ಕೋಣೆಯಲ್ಲಿ ಪತ್ತೆಯಾಗದ ಕಾರಣ ಅವು ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!