
ಲಂಡನ್ (ಬ್ರಿಟನ್) – ಪಶ್ಚಿಮ ಲಂಡನ್‌ನ ಸೌತ್‌ಹಾಲ್ ಪ್ರದೇಶದಲ್ಲಿ ಭಾರತೀಯ ಮೂಲದ ಗುರಭೇಜ್ ಸಿಂಗ್ ಎಂಬ ೨೬ ವರ್ಷದ ಯುವಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ನಾರ್ತ್ ರೋಡ್ ಮತ್ತು ಡಾರ್ಮರ್ಸ್ ವೆಲ್ಸ್ ಲೇನ್ ಪ್ರದೇಶದ ಅಂಗಡಿಯೊಂದರ ಹೊರಗೆ ಈ ಘಟನೆ ನಡೆದಿದೆ.
ಈ ಘಟನೆಯ ಮಾಹಿತಿ ತಿಳಿದ ನಂತರ ಪೊಲೀಸ್ ಮತ್ತು ವೈದ್ಯಕೀಯ ತಂಡ ಸ್ಥಳಕ್ಕೆ ಧಾವಿಸಿತು. ತೀವ್ರವಾಗಿ ಗಾಯಗೊಂಡಿದ್ದ ಗುರಭೇಜ್ ಸಿಂಗ್ ಅವನನ್ನು ಉಳಿಸಲು ಅವರು ಪ್ರಯತ್ನಿಸಿದರಾದರೂ; ಅವನು ಸಾವನ್ನಪ್ಪಿದನು. ಈ ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ೭ ಜನರನ್ನು ವಶಕ್ಕೆ ಪಡೆದಿದ್ದರು. ಪ್ರಾಥಮಿಕ ತನಿಖೆಯ ನಂತರ ೬ ಜನರನ್ನು ಬಿಡುಗಡೆ ಮಾಡಲಾಗಿದ್ದು, ಒಬ್ಬ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಹತ್ಯೆಯ ಹಿಂದಿನ ನಿಖರವಾದ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ಪೊಲೀಸರು ಆಳವಾದ ತನಿಖೆಯನ್ನು ನಡೆಸುತ್ತಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ೪ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮುಖ್ಯ ಆರೋಪಿಗಳ ಬಂಧನ!
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಮುಂಬಯಿ ಮೇಲಿನ ೨೬/೧೧ ರ ಉಗ್ರ ದಾಳಿಯನ್ನು ಕಾಂಗ್ರೆಸ್ ಮತ್ತು ಐ.ಎಸ್.ಐ. ಒಟ್ಟಿಗೆ ಸೇರಿ ನಡೆಸಿದ್ದವು! : 26/11 Attack Claim