ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ

ಮುಂಬಯಿ – ಉದ್ಯಾನವನವೊಂದರಲ್ಲಿ 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತನಾಗಿರುವ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಉಪಾಧೀಕ್ಷಕ ಶ್ರೇಣಿಯ ಅಧಿಕಾರಿಯ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಲಯವು ವಜಾಗೊಳಿಸಿದೆ. ಅವನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಶೇಷ ನ್ಯಾಯಾಧೀಶರು ತಮ್ಮ ಆದೇಶದಲ್ಲಿ, ಈ ಪ್ರಕರಣದ ಆರೋಪಿಯು ಉನ್ನತ ಹುದ್ದೆಯಲ್ಲಿರುವ ಪೊಲೀಸ್ ಅಧಿಕಾರಿಯಾಗಿದ್ದು, ಅವನಿಗೆ ಅಪರಾಧದ ಸ್ವರೂಪ ಮತ್ತು ಅದರ ಪರಿಣಾಮಗಳ ಅರಿವಿದೆ. ತನಿಖೆಯು ಪ್ರಾಥಮಿಕ ಹಂತದಲ್ಲಿರುವುದರಿಂದ ಆರೋಪಿಯನ್ನು ಜಾಮೀನಿನ ಮೇಲೆ ಮುಕ್ತಗೊಳಿಸುವುದು ಸರಿಯಲ್ಲ. ಸಂತ್ರಸ್ತ ಬಾಲಕಿಗೆ ಕೇವಲ 9 ವರ್ಷ ವಯಸ್ಸಾಗಿದ್ದು, ಆಕೆ ಆರೋಪಿಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದ್ದಾರೆ.

ಸಂಪಾದಕೀಯ ನಿಲುವು

ಪೊಲೀಸ್ ಇಲಾಖೆಗೆ ಕಳಂಕ ತಂದಿರುವ ಇಂತಹ ಪೊಲೀಸರಿಗೆ ಗಲ್ಲು ಶಿಕ್ಷೆಯೇ ಆಗಬೇಕು !