ಅಮೆರಿಕದ ಗುಪ್ತಚರ ವರದಿಯಲ್ಲಿನ ಮಾಹಿತಿ

ವಾಷಿಂಗ್ಟನ್ (ಅಮೆರಿಕ) – ಅಮೆರಿಕ ಮತ್ತು ಇರಾನ್ ನಡುವಿನ ಮಾತುಕತೆಗಳ ಹಿನ್ನೆಲೆಯಲ್ಲಿ ಅಮೆರಿಕದ ಗುಪ್ತಚರ ಸಂಸ್ಥೆಗಳು ಒಂದು ವರದಿಯನ್ನು ಬಿಡುಗಡೆ ಮಾಡಿವೆ. ಜೂನ್ ೧೯ ರಂದು ಉಭಯ ದೇಶಗಳ ನಡುವೆ ಕದನ ವಿರಾಮ ಒಪ್ಪಂದಕ್ಕೆ ಅಧಿಕೃತವಾಗಿ ಸಹಿ ಹಾಕಲಾಗುವುದು ಮತ್ತು ಅದರ ನಂತರ ಇರಾನ್‌ನ ಪರಮಾಣು ಕಾರ್ಯಕ್ರಮದ ಕುರಿತು ಮಾತುಕತೆಗಳು ಪ್ರಾರಂಭವಾದರೂ ಗುಪ್ತಚರ ಸಂಸ್ಥೆಗಳ ವರದಿಯ ಪ್ರಕಾರ, ಯುದ್ಧದ ನಂತರ ಇರಾನ್ ಹಿಂದಿಗಿಂತಲೂ ಹೆಚ್ಚು ಶಕ್ತಿಶಾಲಿಯಾಗಿದೆ. ಯುದ್ಧದ ಸಮಯದಲ್ಲಿ ಇರಾನ್ ‘ಹಾರ್ಮುಜ್ ಜಲಸಂಧಿ’ಯನ್ನು (೨ ಜಲಾಶಯಗಳನ್ನು ಜೋಡಿಸುವ ಜಲಮಾರ್ಗ) ಮುಚ್ಚುವ ಮೂಲಕ ಜಗತ್ತಿಗೆ ಆರ್ಥಿಕ ದಿಗ್ಬಂಧನ ವಿಧಿಸಿತ್ತು. ಇನ್ಮುಂದೆಯೂ ಇರಾನ್ ಅದನ್ನು ತನಗೆ ಬೇಕಾದಾಗ ಹಾರ್ಮುಜ್ ಜಲಸಂಧಿಯ ಮೂಲಕ ನಡೆಯುವ ಹಡಗುಗಳ ಸಂಚಾರವನ್ನು ಸ್ಥಗಿತಗೊಳಿಸಬಹುದಾಗಿದೆ. ಯುದ್ಧದ ನಂತರ, ಇರಾನ್ ಈ ಮಾಧ್ಯಮದ ಮೂಲಕ ಜಾಗತಿಕ ಆರ್ಥಿಕತೆಗೆ ಹಾನಿ ತಲುಪಿಸುವ ಒಂದು ಹೊಸ ಶಕ್ತಿಶಾಲಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇರಾನ್‌ಗೆ ಅಣುಬಾಂಬ್‌ಗಿಂತಲೂ ಹೆಚ್ಚು ಪರಿಣಾಮಕಾರಿಯಾದ ಅಸ್ತ್ರವೊಂದು ಸಿಕ್ಕಿದೆ ಎಂದು ಅಮೆರಿಕದ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman