ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳು ಅಕೋಲಾ ತಲುಪಿದವು!

(‘ನೀಟ್’ ಎಂದರೆ ‘ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರನ್ಸ್ ಟೆಸ್ಟ್’, ಅಂದರೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ)

ಅಕೋಲಾ – ‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಜೂನ್ 21 ರಂದು ಮತ್ತೆ ಪರೀಕ್ಷೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಪ್ರಶ್ನೆ ಪತ್ರಿಕೆ ಸಾಗಿಸುವಾಗ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ವಿಶೇಷ ಮುನ್ನೆಚ್ಚರಿಕೆ ವಹಿಸಲಾಯಿತು. ಭಾರತೀಯ ವಾಯುಪಡೆಯ ವಿಶೇಷ ಹೆಲಿಕಾಪ್ಟರ್ ಮೂಲಕ ‘ನೀಟ್’ ನ ಪ್ರಶ್ನೆ ಪತ್ರಿಕೆಗಳನ್ನು ಅಕೋಲಾದ ಶಿವನಿ ವಿಮಾನ ನಿಲ್ದಾಣಕ್ಕೆ ತರಲಾಯಿತು. ಅಲ್ಲಿಂದ ಅವುಗಳನ್ನು ಸುರಕ್ಷಿತ ಸ್ಥಳದಲ್ಲಿರುವ ಕೇಂದ್ರಗಳಿಗೆ ಕೊಂಡೊಯ್ಯಲಾಯಿತು. ಇದಕ್ಕಾಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸಂಪೂರ್ಣ ಪ್ರಕ್ರಿಯೆ ನಡೆಯಿತು. ಈ ಪ್ರಕ್ರಿಯೆಯನ್ನು ಅತ್ಯಂತ ಗೌಪ್ಯವಾಗಿ ನಡೆಸಲಾಗುತ್ತಿದೆ.

ಪ್ರಶ್ನೆ ಪತ್ರಿಕೆಗಳ ಭದ್ರತೆಗಾಗಿ ಬಹು ಹಂತದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು, ಪ್ರವೇಶ ನಿಯಂತ್ರಣ ಹಾಗೂ 24 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಸಂಪಾದಕೀಯ ನಿಲುವು

ಪ್ರಶ್ನೆ ಪತ್ರಿಕೆಗಳಿಗೆ ಇಷ್ಟು ಉನ್ನತ ಮಟ್ಟದ ಭದ್ರತೆಯ ಅಗತ್ಯ ಉಂಟಾಗಿರುವುದು ಶಿಕ್ಷಣ ವ್ಯವಸ್ಥೆಯ ವೈಫಲ್ಯ!