ವಿಶೇಷ ತನಿಖಾ ತಂಡದಿಂದ (SIT) ವಿಚಾರಣೆ

ಅಯೋಧ್ಯೆ (ಉತ್ತರ ಪ್ರದೇಶ) – ಇಲ್ಲಿನ ಶ್ರೀರಾಮ ಮಂದಿರಕ್ಕೆ ಅರ್ಪಿಸಲಾದ ಕಾಣಿಕೆಯ (ದೇಣಿಗೆ) ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮೂರು ದೂರುಗಳನ್ನು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಅಧಿಕೃತ ಪ್ರಕರಣ ದಾಖಲಾಗಿಲ್ಲ. ಮೊದಲ ದೂರನ್ನು ‘ಧರ್ಮಸೇನಾ’ ಸಂಘಟನೆಯ ಸಂಸ್ಥಾಪಕ ಮತ್ತು ಕಾರ್ಸೇವಕ (ಶ್ರೀರಾಮ ಜನ್ಮಭೂಮಿ ಚಳವಳಿಯ ಕಾರ್ಯಕರ್ತ) ಸಂತೋಷ್ ದುಬೆ, ಎರಡನೇ ದೂರನ್ನು ಉತ್ತರ ಪ್ರದೇಶ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶರದ್ ಶುಕ್ಲಾ ಮತ್ತು ಮೂರನೇ ದೂರನ್ನು ಕರ್ಣಿ ಸೇನಾ ದಾಖಲಿಸಿದೆ. ಈ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರವು ವಿಶೇಷ ತನಿಖಾ ತಂಡವನ್ನು (SIT) ರಚಿಸಿದ್ದು, ತನಿಖೆಯೂ ಆರಂಭವಾಗಿದೆ. ತನಿಖಾ ತಂಡವು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಂದ ದೇಣಿಗೆ ಕಳ್ಳತನದ ಬಗ್ಗೆ ಮಾಹಿತಿ ಪಡೆದಿದೆ. ಇದಲ್ಲದೆ, ಟ್ರಸ್ಟ್‌ನ ಸದಸ್ಯ ಗೋಪಾಲ್ ರಾವ್ ಅವರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ತನಿಖಾ ತಂಡವು ೪೨ ಶಂಕಿತ ಉದ್ಯೋಗಿಗಳನ್ನು ಕೂಡ ವಿಚಾರಣೆಗೆ ಒಳಪಡಿಸಿದೆ.
ಆರೋಪಿಗಳನ್ನು ಬಂಧಿಸದಿದ್ದರೆ ಕರ್ಣಿ ಸೇನೆಯಿಂದ ಪ್ರತಿಭಟನೆ!
ಕರ್ಣಿ ಸೇನೆಯ ರಾಜ್ಯಾಧ್ಯಕ್ಷ ಅಭಿನವ್ ಸಿಂಗ್ ಈ ಬಗ್ಗೆ ಮಾತನಾಡಿ, “ದೋಷಿಗಳನ್ನು ಜೈಲಿಗೆ ಕಳುಹಿಸಬೇಕು. ಸಾಮಾನ್ಯವಾಗಿ ತನಿಖೆ ನಡೆಸುವಾಗ ಪೊಲೀಸರು ಸಾಮಾನ್ಯ ಜನರನ್ನು ಜೈಲಿಗೆ ತಳ್ಳುತ್ತಾರೆ; ಆದರೆ ಈ ಪ್ರಕರಣದಲ್ಲಿ ಆರೋಪಿಗಳು ಮುಕ್ತವಾಗಿ ತಿರುಗಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸದಿದ್ದರೆ ಮತ್ತು ಆರೋಪಿಗಳನ್ನು ಬಂಧಿಸದಿದ್ದರೆ ಕರ್ಣಿ ಸೇನೆಯು ಪ್ರತಿಭಟನೆ ನಡೆಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.
ಇದುವರೆಗೆ ಎರಡು ಕೋಟಿ ರೂಪಾಯಿ ವಸೂಲಿ
ಈ ಕಳ್ಳತನ ಪ್ರಕರಣದಲ್ಲಿ ಇದುವರೆಗೆ ೫ ಜನರ ಹೆಸರುಗಳು ಮುಂಚೂಣಿಗೆ ಬಂದಿವೆ. ಲವಕುಶ್, ಅವನೀಶ್, ಅನುಕಲ್ಪ್, ಕರುಣೇ ಮತ್ತು ರಾಮಶಂಕರ್ ಎಂಬವರು ಶಂಕಿತ ಆರೋಪಿಗಳಾಗಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಇವರು ನೀಡಿದ ಮಾಹಿತಿಯ ಆಧಾರದ ಮೇಲೆ ಇದುವರೆಗೆ ಎರಡು ಕೋಟಿ ರೂಪಾಯಿಗಳನ್ನು ವಸೂಲಿ ಮಾಡಲಾಗಿದೆ. ಆರೋಪಿಗಳು ಕಾಣಿಕೆ ಹಣ ಎಣಿಸುವ ಕೆಲಸಕ್ಕೆ ಸಂಬಂಧಿಸಿದವರಾಗಿದ್ದಾರೆ. ಲವಕುಶ್ ಮತ್ತು ಅನುಕಲ್ಪ್ ಸದ್ಯ ಪೊಲೀಸ್ ವಶದಲ್ಲಿದ್ದಾರೆ.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !