
ನ್ಯೂಯಾರ್ಕ್ (ಅಮೆರಿಕ) – ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಸಿಗಬೇಕೆಂದು ಫ್ರಾನ್ಸ್ ಬೆಂಬಲ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಮಹಾಸಭೆಗೆ ಕಳುಹಿಸಿದ ಪತ್ರದಲ್ಲಿ ಫ್ರಾನ್ಸ್ ಭದ್ರತಾ ಮಂಡಳಿಯ ಸಮಗ್ರ ಸುಧಾರಣೆಗಳಿಗೆ ತನ್ನ ಬೆಂಬಲವನ್ನು ಪುನರುಚ್ಚರಿಸಿದೆ. ಇದು ಭಾರತದೊಂದಿಗೆ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್‌ಗೂ ಶಾಶ್ವತ ಸದಸ್ಯತ್ವ ನೀಡಬೇಕೆಂದು ಒತ್ತಾಯಿಸಿದೆ. ಅಲ್ಲದೆ ಆಫ್ರಿಕಾ ಖಂಡಕ್ಕೆ 2 ಸ್ವತಂತ್ರ ಸ್ಥಾನಗಳನ್ನು ನೀಡುವಂತೆ ಬೇಡಿಕೆಯಿಟ್ಟಿದೆ. ಇದರಿಂದ ಈ ಖಂಡಕ್ಕೆ ಆಗಿರುವ ಐತಿಹಾಸಿಕ ಅನ್ಯಾಯವನ್ನು ಸರಿಪಡಿಸುವ ಗುರಿಯನ್ನು ಸಾಧಿಸಬಹುದು ಎಂದು ಫ್ರಾನ್ಸ್ ಹೇಳಿದೆ. ಇದೇ ವಾರ ಯುರೋಪಿಯನ್ ದೇಶ ಸ್ಲೋವಾಕಿಯ ಕೂಡ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸದಸ್ಯತ್ವ ಪಡೆಯಲು ಬೆಂಬಲ ನೀಡಿತ್ತು.
ಫ್ರಾನ್ಸ್ ಭದ್ರತಾ ಮಂಡಳಿಯ ಸದಸ್ಯರ ಸಂಖ್ಯೆಯನ್ನು 25 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಿದೆ, ಇದರಿಂದ ಪ್ರಾತಿನಿಧ್ಯ ಮತ್ತು ಪರಿಣಾಮಕಾರಿತ್ವದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಬಹುದು. ಸದ್ಯ ಭದ್ರತಾ ಮಂಡಳಿಯಲ್ಲಿ 15 ಸದಸ್ಯರಿದ್ದಾರೆ. ಅದರಲ್ಲಿ 5 ಶಾಶ್ವತ ಸದಸ್ಯರು – ಫ್ರಾನ್ಸ್, ಅಮೆರಿಕ, ಚೀನಾ, ರಷ್ಯಾ ಮತ್ತು ಬ್ರಿಟನ್ – ಇದ್ದರೆ, 10 ಸದಸ್ಯರನ್ನು ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ.
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid
ಫ್ರಾನ್ಸ್ನಲ್ಲಿ ಯಹೂದಿಗಳ ಮೇಲಿನ ಸಂಭಾವ್ಯ ಭಯೋತ್ಪಾದಕ ದಾಳಿ ವಿಫಲ
ರಾಜಕೀಯ ಮಾಡಬೇಕೆಂದರೆ, ಸಮವಸ್ತ್ರ ಕಳಚಿ ಚುನಾವಣೆಯಲ್ಲಿ ಭಾಗವಹಿಸಿ! : Maulana Fazlur Rehman
‘ವಿಶ್ವಸಂಸ್ಥೆಯ ಠರಾವಿನಂತೆ ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಬೇಕಂತೆ!’