ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಅವರ ಸ್ವಿಟ್ಜರ್ಲೆಂಡ್ ಪ್ರವಾಸ ರದ್ದು

ವಾಷಿಂಗ್ಟನ್ (ಅಮೆರಿಕ) – ಇಸ್ರೇಲ್ ಲೆಬನಾನ್ ಮೇಲೆ ನಡೆಸಿದ ದಾಳಿಯಿಂದ ಅಮೆರಿಕ ಮತ್ತು ಇರಾನ್ ನಡುವೆ ನಡೆಯಬೇಕಿದ್ದ ಶಾಂತಿ ಮಾತುಕತೆ ಸ್ಥಗಿತಗೊಂಡಿದೆ. ಈ ಕಾರಣದಿಂದಾಗಿ, ಈ ಮಾತುಕತೆಗಾಗಿ ಸ್ವಿಟ್ಜರ್ಲೆಂಡ್‌ಗೆ ತೆರಳಬೇಕಿದ್ದ ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಅವರು ತಮ್ಮ ಪ್ರವಾಸವನ್ನು ರದ್ದುಗೊಳಿಸಿದರು. ಅಮೆರಿಕ ಮತ್ತು ಇರಾನ್ ನಡುವೆ ಇತ್ತೀಚೆಗೆ ನಡೆದ ಶಾಂತಿ ಒಪ್ಪಂದದ ಅನುಷ್ಠಾನಕ್ಕಾಗಿ ಸ್ವಿಟ್ಜರ್ಲೆಂಡ್‌ನ ಬುರ್ಗೆನ್‌ಸ್ಟಾಕ್ ರೆಸಾರ್ಟ್‌ನಲ್ಲಿ ಅಮೆರಿಕ ಮತ್ತು ಇರಾನ್‌ನ ಹಿರಿಯ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಸಭೆ ನಡೆಯಬೇಕಿತ್ತು. ಈ ಸಭೆಯಲ್ಲಿ ವಾನ್ಸ್ ಅವರು ಇರಾನ್ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಶಾಂತಿ ಒಪ್ಪಂದದ ಅನುಷ್ಠಾನದ ಕುರಿತು ಮುಂದಿನ ರೂಪುರೇಷೆಯನ್ನು ನಿರ್ಧರಿಸಬೇಕಿತ್ತು. ಇದೀಗ ಈ ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.
೧. ಈ ಸಭೆ ರದ್ದಾಗಿರುವ ಸುದ್ದಿಯನ್ನು ಸ್ವಿಟ್ಜರ್ಲೆಂಡ್‌ನ ವಿದೇಶಾಂಗ ಸಚಿವಾಲಯ ಅಧಿಕೃತವಾಗಿ ದೃಢಪಡಿಸಿದೆ.
೨. ವಾನ್ಸ್ ಅವರ ನಿಗದಿತ ಸ್ವಿಟ್ಜರ್ಲೆಂಡ್ ಪ್ರವಾಸ ರದ್ದಾದ ಕೆಲವೇ ಗಂಟೆಗಳಲ್ಲಿ, ಎರಡೂ ದೇಶಗಳ ನಡುವಿನ ಮಾತುಕತೆಯ ಮುಂದಿನ ಸುತ್ತನ್ನು ಮುಂದೂಡಲಾಗಿದೆ ಎಂದು ಘೋಷಿಸಲಾಯಿತು.
೩. ‘ಅಲ್-ಮಯಾದೀನ್’ ವರದಿಯ ಪ್ರಕಾರ, ಲೆಬನಾನ್‌ನಲ್ಲಿ ಇಸ್ರೇಲ್ ಮುಂದುವರಿಸಿರುವ ಮಿಲಿಟರಿ ಕಾರ್ಯಾಚರಣೆಯ ಬಗ್ಗೆ ಇರಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬೆಳವಣಿಗೆಗಳಿಂದ ಅಮೆರಿಕ-ಇರಾನ್ ನಡುವಿನ ಶಾಂತಿ ಪ್ರಕ್ರಿಯೆಯಲ್ಲಿ ತಾತ್ಕಾಲಿಕ ಅಡಚಣೆ ಉಂಟಾಗಿದ್ದು, ಮುಂದಿನ ಮಾತುಕತೆಯ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ.
೪. ಮಾತುಕತೆಯ ಸಮಯದಲ್ಲಿ ಇರಾನ್ ಅತ್ಯಂತ ಕಠಿಣ ನಿಲುವನ್ನು ತೆಗೆದುಕೊಂಡಿದೆ. ಇಸ್ರೇಲ್ ದಕ್ಷಿಣ ಲೆಬನಾನ್ ಮೇಲಿನ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಅಲ್ಲಿ ವಶಪಡಿಸಿಕೊಂಡ ಭೂಪ್ರದೇಶವನ್ನು ಮರಳಿಸಬೇಕು ಎಂಬುದು ಇರಾನ್‌ನ ಬೇಡಿಕೆಯಾಗಿದೆ.
೫. ಇಸ್ರೇಲ್ ಈ ಬೇಡಿಕೆಯನ್ನು ತಿರಸ್ಕರಿಸಿದೆ. ‘ಇರಾನ್ ಬೆಂಬಲಿತ ಹಿಜ್ಬುಲ್ಲಾ ಎಂಬ ಶಿಯಾ ಭಯೋತ್ಪಾದಕ ಸಂಘಟನೆಯಿಂದ ಉತ್ತರ ಇಸ್ರೇಲ್‌ಗೆ ದೊಡ್ಡ ಅಪಾಯವಿದೆ. ಆದ್ದರಿಂದ ನಮ್ಮ ಸೈನ್ಯವನ್ನು ಹಿಂಪಡೆಯುವುದಿಲ್ಲ ಮತ್ತು ಹಿಜ್ಬುಲ್ಲಾ ವಿರುದ್ಧ ಹೋರಾಡಲು ಇಸ್ರೇಲಿ ಸೈನ್ಯಕ್ಕೆ ಸಂಪೂರ್ಣ ಸ್ವಾತಂತ್ರ್ಯ ಬೇಕು’ ಎಂದು ಇಸ್ರೇಲ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !