
ನವ ದೆಹಲಿ – ಜನಪ್ರತಿನಿಧಿಗಳ ಪಕ್ಷಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಈ ಅರ್ಜಿಯು ಅಸ್ಪಷ್ಟ, ಸಾಮಾನ್ಯ ಮತ್ತು ಆಧಾರರಹಿತ ಆರೋಪಗಳಿಂದ ಕೂಡಿದೆ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ಮಾತುಗಳಲ್ಲಿ ಹೇಳಿದೆ. ಈ ಆರೋಪಗಳನ್ನು ಬೆಂಬಲಿಸಲು ಯಾವುದೇ ದೃಢವಾದ ದಾಖಲೆ ಅಥವಾ ಪುರಾವೆಗಳನ್ನು ಒದಗಿಸಿಲ್ಲ; ಹಾಗಾಗಿ, ಈ ಅರ್ಜಿಯನ್ನು ಪರಿಗಣಿಸಲು ಯಾವುದೇ ಕಾರಣವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ವಿವಿಧ ರಾಜ್ಯಗಳಲ್ಲಿ ನಡೆದ ರಾಜಕೀಯ ಪಕ್ಷಾಂತರಗಳ ಹಿನ್ನೆಲೆಯಲ್ಲಿ, ಈ ಅರ್ಜಿಯು ಸಾಕಷ್ಟು ಮಹತ್ವದ ಚರ್ಚೆಯನ್ನು ಹುಟ್ಟುಹಾಕಿತ್ತು. ಕೆ.ಕೆ. ರಮೇಶ ಎಂಬ ಅರ್ಜಿದಾರರು ಈ ಅರ್ಜಿಯನ್ನು ದಾಖಲಿಸಿದ್ದರು. ರಾಜ್ಯಗಳಲ್ಲಿನ ಆಡಳಿತಾರೂಢ ಪಕ್ಷಗಳು, ವಿರೋಧ ಪಕ್ಷದ ಶಾಸಕರು ಮತ್ತು ಸಂಸದರಿಗೆ ಹಣದ ಆಮಿಷ ಒಡ್ಡಿ, ಒತ್ತಡ ಹೇರಿ ಅಥವಾ ಇತರ ಮಾರ್ಗಗಳ ಮೂಲಕ ಪಕ್ಷಾಂತರ ಮಾಡುವಂತೆ ಒತ್ತಾಯಿಸುತ್ತಿವೆ ಎಂದು ಅರ್ಜಿಯಲ್ಲಿ ವಾದಿಸಲಾಗಿತ್ತು. ಇಂತಹ ಕೃತ್ಯಗಳನ್ನು ನಿಯಂತ್ರಿಸಲು ನ್ಯಾಯಾಲಯವು ಮಧ್ಯಪ್ರವೇಶಿಸಬೇಕು ಎಂದು ಅರ್ಜಿಯಲ್ಲಿ ವಿನಂತಿಸಲಾಗಿತ್ತು. ಆದರೆ, ಯಾವ ರಾಜ್ಯದಲ್ಲಿ, ಯಾವ ನಾಯಕನಿಂದ ಅಥವಾ ಯಾವ ಘಟನೆಯಲ್ಲಿ ಇಂತಹ ಅಕ್ರಮ ನಡೆದಿದೆ? ಎಂಬುದರ ಕುರಿತು ಯಾವುದೇ ನಿರ್ದಿಷ್ಟ ಹಾಗೂ ದೃಢವಾದ ಮಾಹಿತಿಯನ್ನು ಅರ್ಜಿಯಲ್ಲಿ ನೀಡಿರಲಿಲ್ಲ
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ