ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ತಾನದ ನಾಯಕ ಬಿಲಾವಲ ಭುಟ್ಟೋ ಜರ್ದಾರಿಯವರ ಬಹಿರಂಗ ಬೆದರಿಕೆ

ಇಸ್ಲಾಮಾಬಾದ (ಪಾಕಿಸ್ತಾನ) – ಭಾರತವು ಪಾಕಿಸ್ತಾನದ ನೀರನ್ನು ತಡೆಯಲು ಪ್ರಯತ್ನಿಸಿದರೆ, ಪಾಕಿಸ್ತಾನವು ಅದಕ್ಕೆ ಪ್ರತ್ಯುತ್ತರ ನೀಡಲು ಸಿದ್ಧವಾಗಿದೆ ಎಂದು ‘ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ’ಯ ಅಧ್ಯಕ್ಷ ಬಿಲಾವಲ ಭುಟ್ಟೋ ಜರ್ದಾರಿಯವರು ಸಂಸತ್ತಿನಲ್ಲಿ ಮಾತನಾಡುವಾಗ ಬೆದರಿಕೆ ಹಾಕಿದ್ದಾರೆ. ಸಿಂಧೂ ಜಲ ಒಪ್ಪಂದದ ಕುರಿತು ಪಾಕಿಸ್ತಾನ ಮತ್ತೊಮ್ಮೆ ಆಕ್ರಮಣಕಾರಿ ನಿಲುವನ್ನು ತಳೆದಿದೆ. ನದಿಯ ನೀರಿನಲ್ಲಿರುವ ನಮ್ಮ ಹಕ್ಕಿನ ವಿಷಯದಲ್ಲಿ ನಾವು ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಅದಕ್ಕಾಗಿ ನಾವು ಹೋರಾಡುತ್ತಲೇ ಇರುತ್ತೇವೆ ಎಂದು ಭುಟ್ಟೋ ಮುಂದುವರಿದು ಹೇಳಿದ್ದಾರೆ.
ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಜರ್ದಾರಿ ಅವರು ಸಿಂಧೂ ಜಲ ಒಪ್ಪಂದದ ಕುರಿತು ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಭಾರತವು ಈ ಒಪ್ಪಂದವನ್ನು ಅಮಾನತುಗೊಳಿಸುವುದಾಗಿ ಘೋಷಿಸಿದಾಗಿನಿಂದ ಅವರು ನಿರಂತರವಾಗಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿಂದೆ ಜರ್ದಾರಿಯವರು, ‘ಸಿಂಧೂ ನದಿಯಲ್ಲಿ ಒಂದೋ ನಮ್ಮ ನೀರು ಹರಿಯುತ್ತದೆ ಅಥವಾ ನಿಮ್ಮ (ಭಾರತದ) ರಕ್ತ ಹರಿಯುತ್ತದೆ’ ಎಂಬ ಹೇಳಿಕೆಯನ್ನೂ ನೀಡಿದ್ದರು. ಜರ್ದಾರಿ ಅವರ ಪಿಪಿಪಿ ಪಕ್ಷವು ಪಾಕಿಸ್ತಾನದ ಪ್ರಸ್ತುತ ಶಹಬಾಜ್ ಷರೀಫ್ ಸರಕಾರವನ್ನು ಬೆಂಬಲಿಸುತ್ತಿದೆ.
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !
ಭಯೋತ್ಪಾದನಾ ನಿಗ್ರಹ ದಳದಿಂದ ಪುಣೆ-ಪಿಂಪ್ರಿ ಚಿಂಚವಾಡನಲ್ಲಿ ೨೩ ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ! : Maharashtra ATS Raid