ಜಿಲ್ಲೆಯನ್ನು ನಕಲಿ ವೈದ್ಯರಿಂದ ಮುಕ್ತಗೊಳಿಸುವ ಆದೇಶ

ದಾವಣಗೆರೆ – ಜಿಲ್ಲೆಯಲ್ಲಿ ನಕಲಿ ವೈದ್ಯರ ವ್ಯವಹಾರಕ್ಕೆ ಕಡಿವಾಣ ಹಾಕಲು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿಯು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ಆದೇಶಿಸಿದರು. ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ನಕಲಿ ವೈದ್ಯರ ಪತ್ತೆ ಮತ್ತು ಕಾನೂನು ಕ್ರಮಕ್ಕಾಗಿ ಆಯೋಜಿಸಲಾಗಿದ್ದ ಜಿಲ್ಲಾ ಕ್ರಿಯಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಸಭೆಯಲ್ಲಿ ಉಪಸ್ಥಿತರಿದ್ದ ಎಲ್ಲಾ ವೈದ್ಯಾಧಿಕಾರಿಗಳಿಗೆ ಸ್ಪಷ್ಟ ಸೂಚನೆಗಳನ್ನು ನೀಡಲಾಯಿತು. ನಿಯಮಗಳನ್ನು ಉಲ್ಲಂಘಿಸುವ ನಕಲಿ ವೈದ್ಯರಿಗೆ 25 ಸಾವಿರ ರೂಪಾಯಿಗಳಿಂದ 1 ಲಕ್ಷ ರೂಪಾಯಿಗಳವರೆಗೆ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ಅವಕಾಶವಿದೆ. ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಲ್ಲಿ 40 ನಕಲಿ ವೈದ್ಯರು ಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಈ ಸಭೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ, ಡಾ. ಮಂಜುನಾಥ ಪಾಟೀಲ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಕುಮಾರ್ ಮತ್ತು ವಿವಿಧ ತಾಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ