ಕೆಲವು ವಿದ್ಯಾರ್ಥಿಗಳಿಂದ ಪ್ರಶ್ನೆಪತ್ರಿಕೆ ಖರೀದಿ
(‘ನೀಟ್’ ಎಂದರೆ ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರನ್ಸ್ ಟೆಸ್ಟ್ – ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ)

ಭಿಲ್ವಾರಾ (ರಾಜಸ್ಥಾನ) – ಇಲ್ಲಿ ‘ನೀಟ್’ ಮರುಪರೀಕ್ಷೆಗೆ ೩ ದಿನಗಳ ಮುಂಚಿತವಾಗಿ ಪೊಲೀಸರು ನಕಲಿ ಪ್ರಶ್ನೆಪತ್ರಿಕೆ ಮಾರಾಟ ಮಾಡುತ್ತಿದ್ದ ಆಕಾಶ ಚೌಧರಿ ಎಂಬ ಯುವಕನನ್ನು ಬಂಧಿಸಿದ್ದಾರೆ. ೧೯ ವರ್ಷದ ಆಕಾಶ ಟೆಲಿಗ್ರಾಂ ಚಾನೆಲ್ ಮೂಲಕ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡುವುದಾಗಿ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದನು.
೧. ಆಕಾಶ ಟೆಲಿಗ್ರಾಂನಲ್ಲಿ ‘ಪೇಪರ್ ಮಾಫಿಯಾ’ ಹೆಸರಿನ ಚಾನೆಲ್ ತೆರೆದಿದ್ದನು. ತನ್ನ ಗುರುತು ಸಿಗದಿರಲಿ ಮತ್ತು ಪೊಲೀಸರಿಗೆ ತನ್ನ ಚಟುವಟಿಕೆಗಳನ್ನು ಪತ್ತೆಹಚ್ಚುವುದು ಕಷ್ಟವಾಗಲಿ ಎಂದು, ಅಮೆರಿಕ ಮೂಲದ ‘ವಿ.ಪಿ.ಎನ್.’ (‘ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್’) ಮತ್ತು ‘ಪ್ರಾಕ್ಸಿ ನೆಟ್‌ವರ್ಕ್’ ಮೂಲಕ ಚಾನೆಲ್ ನಡೆಸುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
೨. ಆಕಾಶ ಒಂದು ಪ್ರಶ್ನೆಪತ್ರಿಕೆಗೆ ೪,೦೦೦ ರೂಪಾಯಿಗಳನ್ನು ಪಡೆಯುತ್ತಿದ್ದನು. ಹಣ ಪಾವತಿಸಲು ವಿದ್ಯಾರ್ಥಿಗಳಿಗೆ ‘ಕ್ಯೂ.ಆರ್. ಕೋಡ್’ ಕಳುಹಿಸಿ, ನೇರವಾಗಿ ತನ್ನ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಿಕೊಳ್ಳುತ್ತಿದ್ದನು. ಆತ ನೀಟ್ ಪರೀಕ್ಷೆಯ ಸಿದ್ಧತೆಗೆ ಸಂಬಂಧಿಸಿದ ಪುಸ್ತಕಗಳ ಪುಟಗಳನ್ನು ಸ್ಕ್ಯಾನ್ ಮಾಡಿ ನಕಲಿ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸುತ್ತಿದ್ದನು. ನಂತರ ಅವುಗಳನ್ನೇ ನಿಜವಾದ ಸೋರಿಕೆಯಾದ ಪ್ರಶ್ನೆ ಪತ್ರಿಕೆ ಎಂದು ಅಭ್ಯರ್ಥಿಗಳಿಗೆ ತಲುಪಿಸುತ್ತಿದ್ದನು.
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ