ತಮಿಳುನಾಡು: ಜೋಸೆಫ್ ವಿಜಯ್ ಸರಕಾರದ ಅಭಿನಂದನೀಯ ನಿರ್ಧಾರ
ದೇವಸ್ಥಾನಗಳ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿ ಖರ್ಚು ಮಾಡುವ ಘೋಷಣೆ !

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ಸರಕಾರವು ದೇವಸ್ಥಾನಗಳ 46 ಯೋಜನೆಗಳನ್ನು ರದ್ದುಗೊಳಿಸಿದೆ. ಈ ಯೋಜನೆಗಳಿಗೆ ಹಿಂದಿನ ಸ್ಟಾಲಿನ್ ಸರಕಾರದ ಅವಧಿಯಲ್ಲಿ ಅನುಮೋದನೆ ನೀಡಲಾಗಿತ್ತು. ದೇವಸ್ಥಾನಗಳ ಸ್ಥಿರ ಮತ್ತು ಚರಾಸ್ತಿಗಳನ್ನು ಕೇವಲ ಧಾರ್ಮಿಕ ಹಾಗೂ ದೇವಸ್ಥಾನಗಳಿಗೆ ಸಂಬಂಧಿಸಿದ ಪವಿತ್ರ ಕಾರ್ಯಗಳಿಗಾಗಿ ಮಾತ್ರ ಬಳಸಲಾಗುವುದೆಂದು ಸರಕಾರ ಹೇಳಿದೆ.
ಸರಕಾರಿ ಆದೇಶದಲ್ಲಿ, ಹಿಂದಿನ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಸರಕಾರವು ದೇವಸ್ಥಾನಗಳ ಹಣದಿಂದ 29 ಕಲ್ಯಾಣ ಮಂಟಪಗಳು ಮತ್ತು 17 ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಅನುಮೋದನೆ ನೀಡಿತ್ತು ಈ ಯೋಜನೆಗಳಿಗೆ ಅಂದಾಜು 246 ಕೋಟಿ ರೂಪಾಯಿ ವೆಚ್ಚವಾಗುತ್ತಿತ್ತು; ಆದರೆ ಈ ಕೆಲಸಗಳು ಇನ್ನೂ ಪ್ರಾರಂಭವಾಗಿರಲಿಲ್ಲ. ಈ ಕಾರಣದಿಂದಲೇ ದೇವಸ್ಥಾನಗಳ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಅನುಮೋದನೆಯನ್ನು ರದ್ದುಗೊಳಿಸಲಾಗಿದೆ.
ರಾಜ್ಯದಲ್ಲಿ ಕಳೆದ ಹಲವು ವರ್ಷಗಳಿಂದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳ ಆದಾಯವನ್ನು ಕಲ್ಯಾಣ ಮಂಟಪಗಳನ್ನು ನಿರ್ಮಿಸಲು, ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಮತ್ತು ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಲು ಬಳಸಲಾಗುತ್ತಿತ್ತು; ಆದರೆ ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ಇದನ್ನು ವಿರೋಧಿಸುತ್ತಿದ್ದವು. ದೇವಸ್ಥಾನಗಳ ಆದಾಯವನ್ನು ಕೇವಲ ದೇವಸ್ಥಾನಗಳ ನಿರ್ವಹಣೆ, ಪೂಜೆ-ಪುನಸ್ಕಾರ ಮತ್ತು ಧಾರ್ಮಿಕ ಕಾರ್ಯಗಳಿಗಾಗಿ ಮಾತ್ರ ಖರ್ಚು ಮಾಡಬೇಕೆಂಬುದು ಹಿಂದೂಗಳ ವಾದವಾಗಿತ್ತು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !