
ಬಾರಾಬಂಕಿ (ಉತ್ತರ ಪ್ರದೇಶ) – ಜಿಲ್ಲೆಯಲ್ಲಿ ಪ್ರಾರ್ಥನಾ ಸಭೆ, ಪ್ರೇಮದ ಬಲೆ ಮತ್ತು ವಿವಾಹದ ಆಮಿಷವೊಡ್ಡಿ ನಡೆಸುವ ಮತಾಂತರದ ಪ್ರಕರಣಗಳು ಗ್ರಾಮೀಣ ಪ್ರದೇಶಗಳಿಗೂ ತಲುಪಿವೆ. ಕಳೆದ ಒಂದು ತಿಂಗಳಲ್ಲಿ ರಾಮನಗರ ಮತ್ತು ದೇವಾ ಪ್ರದೇಶಗಳಲ್ಲಿ ಇಂತಹ ಎರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದೆ.
ಮೊದಲ ಪ್ರಕರಣದಲ್ಲಿ ರಾಮನಗರದ ಅಪ್ರಾಪ್ತ ಹಿಂದೂ ಹುಡುಗಿಯ ಬ್ರೈನ್ ವಾಶ್ (Brainwashing) ಮಾಡಿ, ಆಕೆಯನ್ನು ನ್ಯಾಯಾಲಯದ ಮೂಲಕ ವಿವಾಹವಾಗಲು (ಕೋರ್ಟ್ ಮ್ಯಾರೇಜ್) ಒಪ್ಪಿಸಲಾಯಿತು. ಇದರ ನಂತರ ಮತಾಂತರ ಮಾಡುವ ಯೋಜನೆ ಹಾಕಲಾಗಿತ್ತು. ಈ ಪ್ರಕರಣದ ಮುಸ್ಲಿಂ ಆರೋಪಿಯನ್ನು ಸಮಯಕ್ಕೆ ಸರಿಯಾಗಿ ಬಂಧಿಸಲಾಯಿತು.
ಎರಡನೇ ಪ್ರಕರಣದಲ್ಲಿ ಕಳೆದ ತಿಂಗಳು ಮೇ 9 ರಂದು ದೇವಾ ಗ್ರಾಮದ ಕಸ್ಬಾ ಇಚೌಲಿಯಲ್ಲಿ ವಿವಾಹಿತ ಹಿಂದೂ ಮಹಿಳೆ, ಆಕೆಯ ಪತಿ ಮತ್ತು ಅತ್ತೆಯನ್ನು ಬಲವಂತವಾಗಿ ಮನೆಗೆ ಕರೆದೊಯ್ದು ಮತಾಂತರ ಮತ್ತು ನಿಕಾಹ್ ಮಾಡಲು ಒತ್ತಡ ಹೇರಲಾಯಿತು. ಪೊಲೀಸರು ಈ ಪ್ರಕರಣದಲ್ಲಿ ಮಕ್ಸೂದ್ ಮತ್ತು ಅಮನ್ ಎಂಬುವವರನ್ನು ಬಂಧಿಸಿದ್ದಾರೆ.
ಕಾಲಕಾಲಕ್ಕೆ ಬಂದ ದೂರುಗಳ ಪ್ರಕಾರ ಸಫ್ದರ್‌ಗಂಜ್, ಹೈದರ್‌ಗಢ್, ಕುರ್ಸಿ, ಫತೇಪುರ್ ಮತ್ತು ಘುಂಘಟೇರ್ ಪ್ರದೇಶಗಳಲ್ಲಿಯೂ ಇಂತಹ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ.
ಇಂತಹ ಪ್ರಕರಣಗಳಲ್ಲಿ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ! – ಪೊಲೀಸ್ ವರಿಷ್ಠಾಧಿಕಾರಿ
ಪೊಲೀಸ್ ವರಿಷ್ಠಾಧಿಕಾರಿ ಅರ್ಪಿತ್ ವಿಜಯವರ್ಗೀಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಇಂತಹ ಚಟುವಟಿಕೆಗಳ ಮೇಲೆ ನಿರಂತರವಾಗಿ ನಿಗಾ ಇಡಲಾಗುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಇಂತಹ ಪ್ರಕರಣಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ತಿಳಿಸಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!