ಭಾರತವನ್ನು ‘ಹಿಂದೂ ರಾಷ್ಟ್ರವಾಗಲು ಬಿಡಬೇಡಿ’ ಎಂದು ಹೇಳಿದ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ತಿರುಗೇಟು

ಬೆಂಗಳೂರು – ಭಾರತವನ್ನು ಹಿಂದೂ ರಾಷ್ಟ್ರವಾಗಲು ಬಿಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ ೨೧ ರಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ‘ಏನೇ ಆದರೂ ಭಾರತವು ಹಿಂದೂ ರಾಷ್ಟ್ರವೇ ಆಗಿದೆ’ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು, ಸಂವಿಧಾನವನ್ನು ಉಳಿಸಲು ನಾವೆಲ್ಲರೂ ಭಾಜಪ ಮತ್ತು ಆರ್‌ಎಸ್‌ಎಸ್ ವಿರುದ್ಧ ಒಗ್ಗೂಡಿ ಹೋರಾಡಬೇಕು ಎಂದು ಹೇಳಿದ್ದರು. (ಸಂವಿಧಾನವನ್ನು ಹದಗೆಡಿಸಿದ್ದೇ ಕಾಂಗ್ರೆಸ್‌ನವರು, ಅಂತಹವರು ಈಗ ಸಂವಿಧಾನವನ್ನು ಉಳಿಸುವ ಬಗ್ಗೆ ಬೊಬ್ಬೆ ಹೊಡೆಯುತ್ತಿದ್ದಾರೆ! – ಸಂಪಾದಕರು) ವೈವಿಧ್ಯತೆಯನ್ನು ಕಾಪಾಡಬೇಕು ಮತ್ತು ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಕರೆ ನೀಡಿದರು. (ವೈವಿಧ್ಯತೆಯ ಹೆಸರಿನಲ್ಲಿ ಹಿಂದೂಗಳ ಮೇಲಿನ ಅನ್ಯಾಯವನ್ನು ಇನ್ನು ಮುಂದೆ ಹಿಂದೂಗಳು ಸಹಿಸುವುದಿಲ್ಲ. ಅದಕ್ಕಾಗಿಯೇ ಕಾಂಗ್ರೆಸ್ ಅವನತಿಯ ಹಾದಿಯಲ್ಲಿದೆ! – ಸಂಪಾದಕರು)
ಜೋಶಿ ಅವರು ಮಾತನಾಡಿ, ಇಲ್ಲಿ ಹಿಂದೂಗಳ ಜನಸಂಖ್ಯೆ ಹೆಚ್ಚಾಗಿರುವುದರಿಂದಲೇ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿದೆ ಎಂಬುದು ಸಿದ್ದರಾಮಯ್ಯ ಅವರಿಗೆ ತಿಳಿದಿದೆ ಎಂದು ಹೇಳಿದರು. (ಈ ಪ್ರಜಾಪ್ರಭುತ್ವವು ಜಾತ್ಯತೀತವಾಗಿರುವುದರಿಂದ ಇಂದು ಭಾರತದಲ್ಲಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ, ಇದು ವಾಸ್ತವ! – ಸಂಪಾದಕರು) ಪಾಕಿಸ್ತಾನ ಮತ್ತು ಬಾಂಗ್ಲಾದೇಶದಂತಹ ದೇಶಗಳನ್ನು ನೋಡಿ, ಅಲ್ಲಿ ಪ್ರಜಾಪ್ರಭುತ್ವವೇ ಇಲ್ಲ, ಎಂದು ಹೇಳಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”