ಹಿಂದುತ್ವನಿಷ್ಠರ ಜಾಗರೂಕತೆಯಿಂದಾಗಿ ಬಂಧನ

ಮೈಸೂರು – ಹೌರಾ ಎಕ್ಸ್‌ಪ್ರೆಸ್‌ನಲ್ಲಿ ಬಂದಿದ್ದ 40ಕ್ಕೂ ಹೆಚ್ಚು ಬಾಂಗ್ಲಾದೇಶಿ ವಲಸಿಗರನ್ನು ರೈಲ್ವೆ ಮತ್ತು ಸ್ಥಳೀಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಈ ವಲಸಿಗರ ಶಂಕಾಸ್ಪದ ಚಲನವಲನಗಳನ್ನು ಕಂಡು ‘ಹಿಂದೂ ಜಾಗರಣ ವೇದಿಕೆ’ಯ ಕಾರ್ಯಕರ್ತರು ನೀಡಿದ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಕೋಲಕಾತಾದಿಂದ ಪ್ರತಿ ವಾರ ಇಲ್ಲಿಗೆ ಬರುವ ಹೌರಾ ಎಕ್ಸ್‌ಪ್ರೆಸ್‌ನಲ್ಲಿ ಇವರೆಲ್ಲರೂ ಒಟ್ಟಾಗಿ ಮೈಸೂರಿನಲ್ಲಿ ಇಳಿದಿದ್ದರು. ಇವರಲ್ಲಿ ಹೆಚ್ಚಿನವರ ಬಳಿ ಬಂಗಾಳದ ವಿಳಾಸವಿರುವ ಆಧಾರ್ ಕಾರ್ಡ್ ಮತ್ತು ಇತರ ದಾಖಲೆಗಳಿದ್ದರೂ, ಅವುಗಳಲ್ಲಿ ಹೆಚ್ಚಿನ ದಾಖಲೆಗಳು ನಕಲಿ ಇರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಪ್ರತಿಯೊಬ್ಬರೂ ವಿಭಿನ್ನ ಮತ್ತು ಗೊಂದಲದ ಹೇಳಿಕೆಗಳನ್ನು ನೀಡಿದ್ದಾರೆ. ಕೆಲವರು ಮೈಸೂರಿನ ಸಮೀಪದ ಪ್ರದೇಶಗಳಿಗೆ ಕೂಲಿ ಕೆಲಸಕ್ಕಾಗಿ ಬಂದಿರುವುದಾಗಿ ತಿಳಿಸಿದರೆ, ಇನ್ನು ಕೆಲವರು ತಾವು ಪ್ರವಾಸಿಗರು ಎಂದು ಹೇಳಲು ಯತ್ನಿಸಿದರು. ಪೊಲೀಸರ ತನಿಖೆಯ ಪ್ರಕಾರ, ಇವರೆಲ್ಲರೂ ಮೈಸೂರಿನಿಂದ ಕೊಡಗು ಜಿಲ್ಲೆ ಮತ್ತು ನೆರೆಯ ಕೇರಳ ರಾಜ್ಯದ ವಿವಿಧ ಭಾಗಗಳಿಗೆ ತೆರಳಿ ಕಾಫಿ ತೋಟಗಳು ಹಾಗೂ ಇತರ ಕಾರ್ಖಾನೆಗಳಲ್ಲಿ ಕಾನೂನುಬಾಹಿರವಾಗಿ ಕೆಲಸ ಗಿಟ್ಟಿಸಿಕೊಳ್ಳುವ ದೊಡ್ಡ ಯೋಜನೆಯಲ್ಲಿದ್ದರು.
ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬಂದಾಗಿನಿಂದ ವಲಸಿಗರು ಇತರ ರಾಜ್ಯಗಳಿಗೆ ಹೋಗುತ್ತಿದ್ದಾರೆ! – ಎಲ್. ನಾಗೇಂದ್ರ, ಮಾಜಿ ಶಾಸಕ, ಭಾಜಪ
ಈ ಕುರಿತು ಮಾಜಿ ಶಾಸಕ ಎಲ್. ನಾಗೇಂದ್ರ ಮಾತನಾಡಿ, “ಪ್ರತಿ ಭಾನುವಾರ ಬಂಗಾಳದಿಂದ ಬಾಂಗ್ಲಾದೇಶಿ ವಲಸಿಗರು ಮೈಸೂರಿಗೆ ಬರುತ್ತಿದ್ದಾರೆ. ಬಂಗಾಳದಲ್ಲಿ ಭಾಜಪ ಅಧಿಕಾರಕ್ಕೆ ಬಂದ ನಂತರ ವಲಸಿಗರು ಇತರ ರಾಜ್ಯಗಳಿಗೆ ಹೋಗುತ್ತಿದ್ದಾರೆ. ಸರಕಾರ ಇವರ ಮೇಲೆ ತೀವ್ರ ನಿಗಾ ಇಡಬೇಕು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಂಘದ ವಿಷಯಗಳನ್ನು ಬಿಟ್ಟರೆ ಬೇರೇನನ್ನೂ ಮಾಡುತ್ತಿಲ್ಲ. ನಾಳೆ ರಾಜ್ಯದಲ್ಲಿ ಗಲಭೆಯಾದರೆ ಅದಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗುತ್ತದೆ. ತಕ್ಷಣವೇ ಈ ವಲಸಿಗರನ್ನು ತಡೆಯಲು ಕ್ರಮ ಕೈಗೊಳ್ಳಿ” ಎಂದು ಆಗ್ರಹಿಸಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ